ಆರ್ ಸಿಬಿ ಸಾಮಾಜಿಕ ಜಾಲತಾಣಗಳು ಹ್ಯಾಕ್: ಕೊಹ್ಲಿ, ಡಿವಿಲಿಯರ್ಸ್ ಹೇಳಿದ್ದೇನು?

Team Udayavani, Feb 13, 2020, 11:20 AM IST

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ನ ಅತೀ ಜನಪ್ರಿಯ ತಂಡವಾದ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಸಾಮಾಜಿಕ ಜಾಲತಾಣಗಳಲ್ಲೂ ಸದಾ ಮುಂದು. ಇನ್ಸ್ಟಾಗ್ರಾಮ್, ಟ್ವಿಟ್ಟರ್ ಗಳಲ್ಲಿ ಜನರೊಂದಿಗೆ ಸದಾ ಸಂಪರ್ಕ ಸಾಧಿಸುವ ಆರ್ ಸಿಬಿಯ ಎಲ್ಲಾ ಪೇಜ್ ಗಳ ಪ್ರೊಫೈಲ್ ಫೋಟೊಗಳೇ ಕಾಣುತ್ತಿಲ್ಲ. ಫ್ರಾಂಚೈಸಿಯ ಈ ನಡೆ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ವರ್ಷದ ಐಪಿಎಲ್ ಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಸಾಮಾಜಿಕ ಜಾಲತಾಣಗಳಲ್ಲಿ ಈ ನಡೆ ಪ್ರದರ್ಶಿಸಿದೆ. ಆರ್ ಸಿಬಿಯ ಟ್ವಿಟ್ಟರ್ ಮತ್ತು ಇನ್ಸ್ಟಾ ಗ್ರಾಮ್ ಖಾತೆ ಹ್ಯಾಕ್ ಮಾಡಲಾಗದೆಯೇ ಎಂಬ ಅನುಮಾನವನ್ನು ಹಲವು ಅಭಿಮಾನಿಗಳು ತೋಡಿಕೊಂಡಿದ್ದಾರೆ.

ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಕೂಡಾ ಟ್ವೀಟ್ ಮಾಡಿ ತಮ್ಮ ಕಳವಳ ತೋಡಿಕೊಂಡಿದ್ದಾರೆ. ಎಲ್ಲಾ ಪೋಸ್ಟ್ ಗಳು ಕಣ್ಮರೆಯಾಗಿದೆ. ಆದರೆ ತಂಡದ ನಾಯಕನಿಗೆ ಮಾಹಿತಿ ಇಲ್ಲ. ನಿಮಗೆ ಏನಾದರೂ ಸಹಾಯ ಬೇಕಾದರೆ ನಮಗೆ ತಿಳಿಸಿ ಎಂದು ಕೊಹ್ಲಿ ಹೇಳಿದ್ದಾರೆ.

ತಂಡದ ಪ್ರಮುಖ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಟ್ವೀಟ್ ಮಾಡಿದ್ದು, ಅರೆ, ಇದು ಯಾವ ರೀತಿಯ ಗೂಗ್ಲಿ, ಪೋಸ್ಟ್ ಗಳು ಮತ್ತು ಪ್ರೊಫೈಲ್ ಫೋಟೊಗಳು ಎಲ್ಲಿಗೆ ನಾಪತ್ತೆಯಾಗಿವೆ ಎಂದಿದ್ದಾರೆ.

ಸ್ಪೋಟಕ ಆಟಗರಾ ಎಬಿ ಡಿವಿಲಿಯರ್ಸ್ ಕೂಡಾ ಈ ಬಗ್ಗೆ ಟ್ವೀಟ್ ಮಾಡಿದ್ದು, ನಮ್ಮ ಸಾಮಾಜಿಕ ಜಾಲತಾಣ ಖಾತೆಗಳಿಗೆ ಏನಾಗಿದೆ? ಇದು ಸಣ್ಣ ಬ್ರೇಕ್ ಎಂದು ನಂಬಿದ್ದೇನೆ ಎಂದು ತಮ್ಮ ಕಾಳಜಿ ಪ್ರದರ್ಶಿಸಿದ್ದಾರೆ.

ದೇವದತ್ ಪಡಿಕ್ಕಲ್, ಮೈಕ್ ಹೆಸನ್, ದ್ಯಾನೀಶ್ ಸೇಠ್ ಸೇರಿದಂತೆ ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಕೂಡಾ ಟ್ವಿಟ್ಟರ್ ನಲ್ಲಿ ಆರ್ ಸಿಬಿ ನಡೆಯನ್ನು ಪ್ರಶ್ನಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕುಂಬಳಕಾಯಿಯಲ್ಲಿ ಸಿಹಿಕುಂಬಳ, ಬೂದು ಕುಂಬಳ ಎಂಬ ಎರಡು ವಿಧಗಳಿವೆ. ಅದರಲ್ಲಿ ಚೀನಿಕಾಯಿ ಎಂದು ಕರೆಯಲ್ಪಡುವ ಸಿಹಿಗುಂಬಳವನ್ನು ತರಕಾರಿಯಾಗಷ್ಟೇ ಅಲ್ಲದೆ, ಮನೆ...

  • ಏಕಾದಶಿ, ಸಂಕಷ್ಟಹರ ಚತುರ್ಥಿ, ಅಂತ ದೇವರ ಹೆಸರಿನಲ್ಲಿ ಉಪವಾಸ ಮಾಡುವವರಿದ್ದಾರೆ. ಹಾಗೆ ತಿಂಗಳಿಗೊಮ್ಮೆ ಉಪವಾಸ ಮಾಡುವುದು ಆರೋಗ್ಯಕ್ಕೆ ಕೂಡಾ ಒಳ್ಳೆಯದು. ಹಾಗೆಯೇ,...

  • ಹಿಂದಿನ ಕಾಲದಲ್ಲಿ ಮೆಹಂದಿ ಗಿಡವನ್ನು ಅರೆದು ಬಹುತೇಕ ಎಲ್ಲ ಸಂದರ್ಭದಲ್ಲಿಯೂ ಒಂದೇ ಡಿಸೈನ್‌ ಮಾಡುತ್ತಿದ್ದರಂತೆ. ಆದರೆ ಕಾಲಕ್ರಮೇಣ ಮೆಹೆಂದಿ ಕೊನ್‌ ಪರಿಕಲ್ಪನೆ...

  • ಮಜೂರು - ಮಲ್ಲಾರು ಅವಳಿ ಗ್ರಾಮಗಳ ಕಾರ್ಯ ವ್ಯಾಪ್ತಿಯ ಹೈನುಗಾರರ ಬೆಳವಣಿಗೆಯ ಉದ್ದೇಶವನ್ನು ಇಟ್ಟುಕೊಂಡು ದ. ಕ. ಹಾಲು ಒಕ್ಕೂಟದ ಅಧೀನದಲ್ಲಿ 1989 ಮೇ 5ರಂದು ಮಜೂರು...

  • ಗುಣಮಟ್ಟದ ಹಾಲು, ಗರಿಷ್ಠ ಕೃತಕ ಗರ್ಭಧಾರಣೆ, ಹೆಚ್ಚು ಹಾಲು ಸಂಗ್ರಹದಲ್ಲಿ ಉತ್ತಮ ಸಾಧನೆ ಮಾಡಿ, ಅವಿಭಜಿತ ದ.ಕ. ಹಾಲು ಉತ್ಪಾದಕರ ಸಹಕಾರಿ ಒಕ್ಕೂಟ ಮಂಗಳೂರಿನಿಂದ...