ಹ್ಯಾಮಿಲ್ಟನ್ ಪಂದ್ಯದಲ್ಲಿ ಕೊಹ್ಲಿ ಕೇವಲ 25 ರನ್ ಗಳಿಸಿದರೆ ಸಾಕು ಧೋನಿಯ ಈ ದಾಖಲೆ ಮುರಿಯಲು

Team Udayavani, Jan 28, 2020, 12:11 PM IST

ಹ್ಯಾಮಿಲ್ಟನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತೀ ಪಂದ್ಯದಲ್ಲೂ ಹಳೇ ದಾಖಲೆಗಳನ್ನು ಮುರಿದು ಅಲ್ಲಿ ತನ್ನ ಹೆಸರು ಬರೆಯುತ್ತಿರುತ್ತಾರೆ. ಇದೀಗ ಬುಧವಾರ ನಡೆಯಲಿರುವ ಕಿವೀಸ್ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಧೋನಿಯ ದಾಖಲೆಯನ್ನು ಮುರಿಯಲಿದ್ದಾರೆ ವಿರಾಟ್.

ವಿರಾಟ್ ಕೊಹ್ಲಿ ಇನ್ನು ಕೇವಲ 25 ರನ್ ಗಳಿಸಿದರೆ ಮಹೇಂದ್ರ ಸಿಂಗ್ ಧೋನಿಯ ದಾಖಲೆಯೊಂದನ್ನು ಮುರಿಯಲಿದ್ದಾರೆ. ಅಂತಾರಾಷ್ಟ್ರೀಯ ಟಿ 20ಯಲ್ಲಿ ನಾಯಕನಾಗಿ ಅತೀ ಹೆಚ್ಚು ರನ್ ಗಳಿಸಿದವರ ಪೈಕಿ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದು, ಧೋನಿ ಮೂರನೇ ಸ್ಥಾನದಲ್ಲಿದ್ದಾರೆ. ಧೊನಿ ನಾಯಕನಾಗಿ 1112 ರನ್ ಗಳಿಸಿದ್ದು, ಕೊಹಲಿ 1087 ರನ್ ಗಳಿಸಿದ್ದಾರೆ. ಹಾಗಾಗಿ ಕೊಹ್ಲಿ 25 ರನ್ ಗಳಿಸಿದರೆ ಸಾಕು ಧೋನಿಯ ದಾಖಲೆಯನ್ನು ಅಳಿಸಿ ಕೊಹ್ಲಿ ಹೊಸ ದಾಖಲೆ ವೀರನಾಗುತ್ತಾನೆ.

ಆದರೆ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವುದು ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್ (1273 ರನ್). ಎರಡನೇ ಸ್ಥಾನದಲ್ಲಿ ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಅವರಿದ್ದಾರೆ. (1148).

ಸರಣಿಯ ಮೂರನೇ ಟಿ ಟ್ವೆಂಟಿ ಪಂದ್ಯ ಬುಧವಾರ ಹ್ಯಾಮಿಲ್ಟನ್ ನಲ್ಲಿ ನಡೆಯಲಿದೆ. ಆಕ್ಲೆಂಡ್ ನಲ್ಲಿ ನಡೆದಿದ್ದ ಮೊದಲೆರಡು ಪಂದ್ಯವನ್ನು ಭಾರತ ವಿಜಯ ಗಳಿಸಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ