ವಿಂಡೀಸ್ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ವಾಷಿಂಗ್ಟನ್: ಬದಲಿಯಾಗಿ ಕುಲದೀಪ್ ಆಯ್ಕೆ
Team Udayavani, Feb 15, 2022, 8:37 AM IST
ಕೋಲ್ಕತ್ತಾ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಸಿದ್ದತೆ ನಡೆಸುತ್ತಿದೆ. ಈಗಾಗಲೇ ಗಾಯದ ಸಮಸ್ಯೆ ಎದುರಿಸುತ್ತಿರುವ ತಂಡಕ್ಕೆ ಮತ್ತೆ ಆಘಾತ ಎದುರಾಗಿದೆ. ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಕೂಡಾ ಸರಣಿಯಿಂದ ಹೊರಬಿದ್ದಿದ್ದಾರೆ.
ವಾಷಿಂಗ್ಟನ್ ಸುಂದರ್ ಅವರು ಮಂಡಿರಜ್ಜು ನೋವಿಗೆ ಒಳಗಾಗಿದ್ದಾರೆ. ಹೀಗಾಗಿ ಅವರು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ. ಸುಂದರ್ ಬದಲಿಗೆ ಚೈನಮನ್ ಸ್ಪಿನ್ನರ್ ಕುಲದೀಪ್ ಯಾದವ್ ಆಯ್ಕೆಯಾಗಿದ್ದಾರೆ.
ಕಳೆದ ಶುಕ್ರವಾರ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಫೀಲ್ಡಿಂಗ್ ವೇಳೆ ಎಡ ಮಂಡಿರಜ್ಜು ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:ಅಮ್ಮನ ಜೀವ ತಗೆದ ಮಗಳ ವಾಟ್ಸ್ಆ್ಯಪ್ ಸ್ಟೇಟಸ್
ಕೆಲ ದಿನಗಳ ಹಿಂದೆ ಉಪನಾಯಕ ಕೆ ಎಲ್ ರಾಹುಲ್ ಅವರು ಗಾಯದ ಕಾರಣದಿಂದ ಮತ್ತು ಆಲ್ ರೌಂಡರ್ ಅಕ್ಷರ್ ಪಟೇಲ್ ಅವರು ಕೋವಿಡ್ ನಿಂದ ಸಂಪೂರ್ಣ ಚೇತರಿಸದ ಕಾರಣದಿಂದ ಟಿ20 ಸರಣಿಯಿಂದ ಹೊರಬಿದ್ದಿದ್ದರು.
ಫೆ.16ರಂದು ಮೊದಲ ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ಉಪನಾಯಕ) (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಋತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ಕುಲದೀಪ್ ಯಾದವ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ