Weightlifting: ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ
Team Udayavani, Mar 25, 2024, 12:31 AM IST
ಮೂಡುಬಿದಿರೆ: ಮಂಗಳೂರು ವಿ.ವಿ. ಅಂತರ್ ಕಾಲೇಜು ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿ ಜಯಿಸಿದೆ.
ಮಂಗಳೂರಿನ ಎಸ್ಡಿಎಂ ಬಿಬಿಎಂ ಕಾಲೇಜಿನಲ್ಲಿ ನಡೆದ ಸ್ಪರ್ಧೆಯಲ್ಲಿ ಆಳ್ವಾಸ್ ಪುರುಷರ ಮತ್ತು ಮಹಿಳೆಯರ ತಂಡಗಳು ಟ್ರೋಫಿ ಗೆಲ್ಲುವ ಮೂಲಕ ಸಮಗ್ರ ತಂಡ ಪ್ರಶಸ್ತಿಗೆ ಪಾತ್ರವಾಗಿದೆ.
ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜು 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚಿನ ಪದಕಗಳ ಸಹಿತ 61 ಅಂಕ ಗಳಿಸಿ, ಪ್ರೊ. ರಿಚರ್ಡ್ ರೆಬೆಲ್ಲೊ ರೋಲಿಂಗ್ ಟ್ರೋಫಿ ಪಡೆಯಿತು. ಎಸ್ಡಿಎಂ ಕಾಲೇಜು ದ್ವಿತೀಯ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ತೃತೀಯ ಸ್ಥಾನ ಪಡೆದವು.
ಮಹಿಳಾ ವಿಭಾಗದಲ್ಲಿ ಆಳ್ವಾಸ್ ಸತತ 20ನೇ ಬಾರಿ ತಂಡ ಪ್ರಶಸ್ತಿ ಜಯಿಸಿತು. 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚಿನ ಪದಕಗಳೊಂದಿಗೆ ಶಿರ್ವ ಬ್ಲೊಸಮ್ ಮನ್ವಿನ್ ಸೆಲೆಸ್ಟಿನ್ ಡಿ’ಸೋಜ ಟ್ರೋಫಿ ಗೆದ್ದಿತು. ಉಜಿರೆ ಎಸ್ಡಿಎಂ ಕಾಲೇಜು ದ್ವಿತೀಯ ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜು ತೃತೀಯ ಸ್ಥಾನ ಪಡೆದಿವೆ.
ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ