ವಿರಾಟ್, ಶ್ರೇಯಸ್ ಬ್ಯಾಟಿಂಗ್ ಸಾಹಸ, ಸರಣಿ ಭಾರತ ಕೈ ವಶ

Team Udayavani, Aug 15, 2019, 9:32 AM IST

ಟ್ರಿನಿಡಾಡ್ : ನಾಯಕ ವಿರಾಟ್ ಕೊಹ್ಲಿ 43ನೇ ಶತಕ ಹಾಗೂ ಶ್ರೇಯಸ್ ಅಯ್ಯರ್ ಅವರ ಜವಾಬ್ದಾರಿಯುತ ಆಟದಿಂದ ಭಾರತ, ವೆಸ್ಟ್ ಇಂಡಿಸ್ ವಿರುಧ್ದದ 3ನೇ ಏಕದಿನ ಪಂದ್ಯವನ್ನು ಗೆದ್ದಿದೆ . ಈ ಮೂಲಕ ಮೂಲಕ ಸರಣಿಯನ್ನು 2-0 ಯಿಂದ ಕೈವಶ ಮಾಡಿಕೊಂಡಿದೆ.

ಕ್ವಿನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆದ ಪಂದ್ಯವನ್ನು ಮಳೆಯಿಂದ 35 ಓವರ್ ಗೆ ಇಳಿಸಲಾಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡಿಸ್ 35 ಓವರ್ ಗಳಲ್ಲಿ 7 ವಿಕಟ್ ನಷ್ಟಕ್ಕೆ 240 ರನ್ ಗಳಿಸಿತು. ಡಕ್ವರ್ತ್ ಲೂಯಿಸ್ ನಿಯಮದಡಿ ಭಾರತಕ್ಕೆ 35 ಓವರ್‌ಗಳಲ್ಲಿ 255 ರನ್ ಗುರಿ ನೀಡಲಾಯಿತು. ಗುರಿ ಬೆನ್ನೆತ್ತಿದ ಭಾರತ 32.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 256 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ಆಕರ್ಷಕ ಬ್ಯಾಟಿಂಗ್ ನಡೆಸಿದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ( 114*) ಗಳಿಸಿದರೆ, ಶ್ರೇಯಸ್ ಅಯ್ಯರ್ ಅರ್ಧಶತಕ (65) ಗಳಿಸುವ ಮೂಲಕ ಕೊಹ್ಲಿಗೆ ಉತ್ತಮ ಸಾಥ್ ನೀಡಿದರು. ಉಳಿದಂತೆ ಶಿಖರ್ ಧವನ್ (36) ಹಾಗೂ ಕೇಧಾರ್ ಜಾಧವ್(19*) ಜವಬ್ದಾರಿಯುತ ಬ್ಯಾಟಿಂಗ್ ನಡೆಸಿದರು .

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ