
Qualifier 2: ಮುಂಬೈ- ಗುಜರಾತ್ ಪಂದ್ಯ ಮಳೆ ಬಂದು ರದ್ದಾದರೆ ಯಾರಿಗೆ ಲಾಭ?
Team Udayavani, May 26, 2023, 6:43 PM IST

ಅಹಮದಾಬಾದ್: ಐಪಿಎಲ್ 2023ರ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡುತ್ತಿವೆ. ಇಂದಿನ ಪಂದ್ಯ ಗೆಲ್ಲುವ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫೈನಲ್ ಪಂದ್ಯವಾಡಲಿದೆ.
ಈ ಪಂದ್ಯವು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಕ್ಯಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಸೋಲನುಭವಿಸಿತ್ತು. ಮತ್ತೊಂದೆಡೆ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ತಂಡವು ಈ ಹಂತಕ್ಕೆ ತೇರ್ಗಡೆಯಾಗಿದೆ.
ಒಂದು ವೇಳೆ ಇಂದಿನ ಪಂದ್ಯದಲ್ಲಿ ಹವಾಮಾನ ಪರಿಸ್ಥಿತಿಗಳಿಂದಾಗಿ ಸಂಪೂರ್ಣ ವಾಶ್‌ಔಟ್ ಅಥವಾ ಫಲಿತಾಂಶ ಬರದೇ ಇದ್ದಲ್ಲಿ, ಮುಂಬೈ ಇಂಡಿಯನ್ಸ್ ತಂಡಕ್ಕೆ ಅನಾನುಕೂಲವಾಗಲಿದೆ. ಯಾಕೆಂದರೆ ಗುಜರಾತ್ ಟೈಟಾನ್ಸ್ ಲೀಗ್ ಹಂತದಲ್ಲಿ ಮುಂಬೈಗಿಂತ ಉನ್ನತ ಸ್ಥಾನದಲ್ಲಿತ್ತು. ಹೀಗಾಗಿ ಇಂದಿನ ಪಂದ್ಯ ರದ್ದಾದರೆ ಗುಜರಾತ್ ಟೈಟಾನ್ಸ್ ಫೈನಲ್ ಗೆ ಅರ್ಹತೆ ಪಡೆಯಲಿದೆ.
ಗುಜರಾತ್ ಟೈಟಾನ್ಸ್ ಸಂಭಾವ್ಯ XI: ಶುಭಮನ್ ಗಿಲ್, ವೃದ್ಧಿಮಾನ್ ಸಹಾ (ವಿ.ಕೀ), ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾ), ಡೇವಿಡ್ ಮಿಲ್ಲರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ನೂರ್ ಅಹ್ಮದ್.
ಮುಂಬೈ ಇಂಡಿಯನ್ಸ್ ಸಂಭಾವ್ಯ XI: ರೋಹಿತ್ ಶರ್ಮಾ (ನಾ), ಇಶಾನ್ ಕಿಶನ್ (ವಿ.ಕೀ), ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಕ್ರಿಸ್ ಜೋರ್ಡಾನ್, ಜೇಸನ್ ಬೆಹ್ರೆನ್‌ಡಾರ್ಫ್, ಆಕಾಶ್ ಮದ್ವಾಲ್.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಇನ್ನಿಂಗ್ಸ್ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Thailand Open badminton ಸೆಮಿಯಲ್ಲಿ ಸೋತ ಲಕ್ಷ್ಯ ಸೇನ್

French Open Grand Slam-2023: ರುನೆ, ಸ್ವಿಯಾಟೆಕ್, ಗಾಫ್ ಮುನ್ನಡೆ

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
