ಹೈದರಾಬಾದ್ ನಲ್ಲಿ ಬ್ಲಾಕ್ ಟಿಕೆಟ್ ಮಾರಾಟ?: ಅಜರುದ್ದೀನ್ ಹೇಳಿದ್ದೇನು?
Team Udayavani, Sep 23, 2022, 10:38 PM IST
ಹೈದರಾಬಾದ್ : ಜನರು ಏನೇ ಹೇಳುತ್ತಿದ್ದರೂ ಅದು ಸುಳ್ಳಾಗಿದೆ, ನನ್ನ ಬಳಿ ಮಾರಾಟವಾದ ಎಲ್ಲಾ ಟಿಕೆಟ್ಗಳ ಪಟ್ಟಿ ಇದೆ. ಎಲ್ಲವನ್ನೂ ದಾಖಲಿಸಲಾಗಿದೆ ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೆಷನ್ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಹೇಳಿಕೆ ನೀಡಿದ್ದಾರೆ.
ಹೈದರಾಬಾದ್ ನಲ್ಲಿ ಬ್ಲಾಕ್ ಟಿಕೆಟ್ ಮಾರಾಟ ಮಾಡಲಾಗಿರುವುದು ಘರ್ಷಣೆಗೆ ಕಾರಣವಾಗಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ಮರೆಮಾಡಲು ಏನೂ ಇಲ್ಲ. ಟಿಕೆಟ್ ಸಮಸ್ಯೆಗೆ ಸಂಬಂಧಿಸಿದಂತೆ, ಬ್ಲಾಕ್ ಟಿಕೆಟ್ ಮಾರಾಟವಾಗಿದೆ ಎಂದು ಜನರು ಹೇಳುವುದು ತಪ್ಪು ಕಲ್ಪನೆ ಎಂದಿದ್ದಾರೆ.
ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 25 ರಂದು ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಟಿ 20 ಪಂದ್ಯದ ಟಿಕೆಟ್ ಪಡೆಯಲು ಅಪಾರ ಸಂಖ್ಯೆಯ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ ನಂತರ ಜಿಮ್ಖಾನಾ ಮೈದಾನದಲ್ಲಿ ಗುರುವಾರ ಕಾಲ್ತುಳಿತ ಸಂಭವಿಸಿತ್ತು. ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು .ಕನಿಷ್ಠ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ