ವನಿತಾ ಹಾಕಿ: ಭಾರತ ಸೆಮಿಫೈನಲಿಗೆ
Team Udayavani, Apr 11, 2018, 7:30 AM IST
ಗೋಲ್ಡ್ ಕೋಸ್ಟ್: ಭಾರತೀಯ ವನಿತಾ ಹಾಕಿ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 1-0 ಅಂತರದಿಂದ ಮಣಿಸುವ ಮೂಲಕ ಗೇಮ್ಸ್ನ ಸೆಮಿಫೈನಲ್ ಸ್ಪರ್ಧೆಗೆ ಪ್ರವೇಶ ಗಿಟ್ಟಿಸಿಕೊಂಡಿದೆ. ಮಂಗಳವಾರ ನಡೆದ “ಎ’ ಗುಂಪಿನ ಅಂತಿಮ ಲೀಗ್ ಪಂದ್ಯದಲ್ಲಿ ಭಾರತ ತಂಡವು ಗೆಲುವು ಸಾಧಿಸುವುದರೊಂದಿಗೆ ಮೂಂದಿನ ಹಂತಕ್ಕೆ ಲಗ್ಗೆಯಿಟ್ಟಿದೆ.
ನಾಯಕಿ ರಾಣಿ ರಾಮ್ಪಾಲ್ 47 ನಿಮಿಷದಲ್ಲಿ ಹೊಡೆದ ಗೋಲಿನ ನೆರವಿನಿಂದ ಭಾರತ ತಂಡ ಜಯ ದಾಖಲಿಸಿತು. ಈ ವಿಜಯದ ಬಳಿಕ ಭಾರತದ ಒಟ್ಟು 9 ಅಂಕಗಳೊಂದಿಗೆ “ಎ’ ಗುಂಪಿನಲ್ಲಿ ಎರಡನೇ ತಂಡವಾಗಿ ಉಳಿದುಕೊಂಡಿದೆ. ಇಂಗ್ಲೆಂಡ್ ತಂಡವೂ ಎರಡನೇ ಸ್ಥಾನದಲ್ಲಿದ್ದರೂ ಗೋಲ್ ಅಂತರದಿಂದ ಅಗ್ರಸ್ಥಾನದಲ್ಲಿದೆ.
ದಕ್ಷಿಣ ಆಫ್ರಿಕಾ ತಂಡ ಒಟ್ಟು 4 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ತಂಡವು ನಾಲ್ಕನೇ ಸ್ಥಾನದಲ್ಲಿರುವ ವೇಲ್ಸ್ ತಂಡವನ್ನು ಮುಂದಿನ ಲೀಗ್ ಪಂದ್ಯದಲ್ಲಿ ಎದುರುಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ