ವನಿತಾ ಟಿ20 ರ್‍ಯಾಂಕಿಂಗ್‌: ರೋಡ್ರಿಗಸ್‌, ಮಂಧನಾ 4 ಸ್ಥಾನ ಏರಿಕೆ

Team Udayavani, Feb 13, 2019, 12:30 AM IST

b-17.jpg

ದುಬಾೖ: ನ್ಯೂಜಿಲ್ಯಾಂಡ್‌ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ವೈಟ್‌ವಾಶ್‌ಗೆ ಒಳಗಾಗಿದ್ದರೂ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಪ್ರಕಟಿಸಿದ ನೂತನ ವನಿತಾ ಟಿ20 ರ್‍ಯಾಂಕಿಂಗ್‌ನಲ್ಲಿ ಭಾರತೀಯ ವನಿತೆಯರು ಗಮನಾರ್ಹ ನಿರ್ವಹಣೆ ದಾಖಲಿಸಿದ್ದಾರೆ. ಬ್ಯಾಟ್ಸ್‌ವುಮನ್‌ ರ್‍ಯಾಂಕಿಂಗ್‌ನಲ್ಲಿ ಭಾರತದ ಜೆಮಿಮಾ ರೋಡ್ರಿಗ‌ಸ್‌ ಮತ್ತು ಸ್ಮತಿ ಮಂಧನಾ ಅನುಕ್ರಮವಾಗಿ 2ನೇ ಹಾಗೂ 6ನೇ ಸ್ಥಾನ ಗಳಿಸಿ ತಮ್ಮ ಸಾಧನೆಯನ್ನು ಉತ್ತಮಪಡಿಸಿಕೊಂಡಿದ್ದಾರೆ. 

ನ್ಯೂಜಿಲ್ಯಾಂಡ್‌ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ 132 ರನ್‌ ಗಳಿಸಿದ ರೋಡ್ರಿಗಸ್‌ 2ನೇ ಸ್ಥಾನಕ್ಕೆ ಏರಿದ್ದಾರೆ. ಕಳೆದ ವಾರ ಬಿಡುಗಡೆಯಾದ ಏಕದಿನ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಕ್ಕೇರಿದ್ದ ಸ್ಮತಿ ಮಂಧನಾ ಟಿ20 ರ್‍ಯಾಂಕಿಂಗ್‌ನಲ್ಲಿ 4 ಸ್ಥಾನಗಳ ಏರಿಕೆ ಕಂಡು 6ನೇ ಸ್ಥಾನಕ್ಕೆ ಜಿಗಿದಿದ್ದಾರೆ. ನ್ಯೂಜಿಲ್ಯಾಂಡ್‌ ವಿರುದ್ಧದ ಸರಣಿಯಲ್ಲಿ ಅತ್ಯಧಿಕ ರನ್‌ ಗಳಿಸಿದ ಆಟಗಾರ್ತಿ ಎನಿಸಿಕೊಂಡಿರುವ ಮಂಧನಾ 2 ಅರ್ಧಶತಕ ಬಾರಿಸಿದ್ದರು.

ಬೌಲಿಂಗ್‌ ವಿಭಾಗದಲ್ಲಿ ಸ್ಪಿನ್ನರ್‌ ರಾಧಾ ಯಾದವ್‌ 18 ಸ್ಥಾನಗಳ ಜಿಗಿತ ಕಂಡು ಅಗ್ರ 10 ಬೌಲರ್‌ಗಳ ಪಟ್ಟಿಯಲ್ಲಿ ಸ್ಥಾನ ಸಂಪಾದಿಸಿದ್ದಾರೆ. ದೀಪ್ತಿ ಶರ್ಮಾ 5 ಸ್ಥಾನಗಳ ಏರಿಕೆ ಕಂಡು 14ನೇ ಸ್ಥಾನಕ್ಕೆ ಬಂದಿದ್ದಾರೆ. 

ನ್ಯೂಜಿಲ್ಯಾಂಡ್‌ ತಂಡದಲ್ಲಿ ಸೋಫಿ ಡಿವೈನ್‌ 11ನೇ ಸ್ಥಾನದಿಂದ 8ನೇ ಸ್ಥಾನಕ್ಕೇರಿದ್ದರೆ, ನಾಯಕಿ ಆ್ಯಮಿ ಸ್ಯಾಟರ್‌ವೆàಟ್‌ 23ರಿಂದ 17ನೇ ಸ್ಥಾನ ಗಳಿಸಿದ್ದಾರೆ. ಬೌಲರ್‌ಗಳಲ್ಲಿ ಲೀ ಟಹುಹು 5 ಸ್ಥಾನಗಳ ಏರಿಕೆ ಕಂಡು 11ನೇ ಸ್ಥಾನದಲ್ಲಿದ್ದಾರೆ. 

ಡೊಟಿನ್‌ಗೆ ಅಗ್ರಸ್ಥಾನ
ವಿಂಡೀಸ್‌ನ ಡಿಯಾಂಡ್ರ ಡೊಟಿನ್‌ ಅಲ್‌ರೌಂಡರ್ ವಿಭಾಗದಲ್ಲಿ ಅಗ್ರಸ್ಥಾನ ಸಂಪಾದಿಸಿದ್ದಾರೆ. ಬ್ಯಾಟಿಂಗ್‌ ವಿಭಾಗದಲ್ಲಿ ಡೊಟಿನ್‌ 3ನೇ ಸ್ಥಾನ ಸಂಪಾದಿಸಿದ್ದರೆ, ಬೌಲಿಂಗ್‌ ವಿಭಾಗದಲ್ಲಿ 29ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ಥಾನದ ನಾಯಕಿ ಬಿಸ್ಮಾ ಮರೂಫ್ ಬ್ಯಾಟಿಂಗ್‌ ವಿಭಾಗದಲ್ಲಿ 15ನೇ ಸ್ಥಾನ ಸಂಪಾದಿಸಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಸನಾ ಮಿರ್‌ 28ನೇ ಸ್ಥಾನ ಗಳಿಸಿದ್ದಾರೆ. 

ನಂ. 4ರಲ್ಲಿ ಭಾರತ
ತಂಡಗಳ ರ್‍ಯಾಂಕಿಂಗ್‌ನಲ್ಲಿ ನ್ಯೂಜಿ ಲ್ಯಾಂಡ್‌ ತಂಡ ಇಂಗ್ಲೆಂಡನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದೆ. ಆಸ್ಟ್ರೇಲಿಯ ಅಗ್ರಸ್ಥಾನ ವನ್ನು ಉಳಿಸಿಕೊಂಡಿದೆ. ಭಾರತ, ವೆಸ್ಟ್‌ ಇಂಡೀಸ್‌ ತಂಡ 4 ಹಾಗೂ 5ನೇ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.