ರೈಲ್ವೇ ಇಲಾಖೆಯಿಂದ ಸುಶೀಲ್ ಕುಮಾರ್ ಅಮಾನತು?
Team Udayavani, May 25, 2021, 9:25 AM IST
ಹೊಸದಿಲ್ಲಿ: ಕೊಲೆ ಪ್ರಕರಣದಲ್ಲಿ ಸಿಲುಕಿ ಪೊಲೀಸ್ ಕಸ್ಟಡಿಯಲ್ಲಿರುವ ಕುಸ್ತಿಪಟು ಸುಶೀಲ್ ಕುಮಾರ್ ಅವರೀಗ ಉದ್ಯೋಗ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾರೆ.
ಸುಶೀಲ್ ಕುಮಾರ್ ಉತ್ತರ ರೈಲ್ವೇಯ ಉದ್ಯೋಗಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಮಂಡಳಿ ರವಿವಾರವೇ ದಿಲ್ಲಿ ಸರಕಾರದಿಂದ ವರದಿಯೊಂದನ್ನು ತರಿಸಿಕೊಂಡಿದೆ.
ಸುಶೀಲ್ ವಿರುದ್ಧ ಎಫ್ಐಆರ್ ದಾಖಲಾಗಿರುವುದರಿಂದ ಅವರನ್ನು ಕೆಲಸದಿಂದ ಅಮಾನತುಗೊಳಿಸಬಹುದಾಗಿದೆ ಎಂಬುದಾಗಿ ಉತ್ತರ ರೈಲ್ವೇಯ ಸಿಪಿಆರ್ಒ ದೀಪಕ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ:ರಣಜಿ ಟ್ರೋಫಿ ಸಾಧನೆಗೆ ಬೆಲೆಯೇ ಇಲ್ಲದಂತಾಗಿದೆ : ಉನಾದ್ಕತ್ ನಿರಾಸೆ
ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶೀಲ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಕೆಲವು ದಿನಗಳ ಕಾಲ ತಲೆಮರೆಸಿಕೊಂಡಿದ್ದ ಸುಶೀಲ್ ಕುಮಾರ್ ಅವರನ್ನು ದೆಹಲಿ ಪೊಲೀಸರು ರವಿವಾರ ಬಂಧಿಸಿದ್ದರು. ಅಂದಹಾಗೆ ಸುಶೀಲ್ ಕುಮಾರ್ ಎರಡು ಬಾರಿ ಒಲಿಪಿಂಕ್ ಪದಕ ವಿಜೇತ ಕುಸ್ತಿಪಟು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ