ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನೆಲೆ : ಶಾಸಕರ ಮನೆಗೆ ಬೆಂಕಿ; ಓರ್ವ ಬಲಿ ?


Team Udayavani, Aug 11, 2020, 11:48 PM IST

ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನೆಲೆ : ಶಾಸಕರ ಮನೆಗೆ ಬೆಂಕಿ

ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಧಾರ್ಮಿಕ ಅವಹೇಳನ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಕಾವಲ್‌ಬೈರಸಂದ್ರದಲ್ಲಿರುವ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮತ್ತು ಕಚೇರಿ ಮೇಲೆ ಉದ್ರಿಕ್ತ ಗುಂಪೊಂದು ಮಂಗಳವಾರ ರಾತ್ರಿ ದಾಳಿ ನಡೆಸಿ ಬೆಂಕಿ ಹಚ್ಚಿದೆ.

ಜತೆಗೆ ಕಾಡಗೊಂಡನಹಳ್ಳಿ ಪೊಲೀಸ್‌ ಠಾಣೆಗೆ ದಿಗ್ಬಂಧನ ಹಾಕಿರುವ ಗುಂಪು, ಶಾಸಕರು ಹಾಗೂ ಅವರ ಸಂಬಂಧಿ ನವೀನ್‌ ಮನೆ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಬೆಂಕಿ ಹಚ್ಚಿದೆ. ಪೊಲೀಸರತ್ತ ಕಲ್ಲು ತೂರಾಟ ನಡೆಸಿರುವ ಉದ್ರಿಕ್ತರು ಆರೋಪಿ ಠಾಣೆಯಲ್ಲಿದ್ದಾನೆ ಎಂದು ಆರೋಪಿಸಿ ಕೆಲವು ಪೊಲೀಸರಿಗೆ ಹಲ್ಲೆ ನಡೆಸಿದ್ದಾರೆ. ಇದರಿಂದ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸರು ಉದ್ರಿಕ್ತರತ್ತ ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸಿದ್ದಾರೆ.

ಪೊಲೀಸ್‌ ಆಯುಕ್ತ ಕಮಲ್‌ಪಂಥ್‌, ಡಿಸಿಪಿ ಶರಣಪ್ಪ, ಹೆಚ್ಚುವರಿ ಪೊಲೀಸ್‌ ಆಯುಕ್ತ¤ರಾದ ಸೌಮೇಂದು ಮುಖರ್ಜಿ, ಎಸ್‌. ಮುರುಗನ್‌ ಹಾಗೂ ಮೀಸಲು ಪೊಲೀಸ್‌ ಪಡೆಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಶ್ರೀನಿವಾಸಮೂರ್ತಿ ಅವರ ಸಂಬಂಧಿ ನವೀನ್‌ ಎಂಬವರು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಆಕ್ರೋಶಗೊಂಡ ಒಂದು ಕೋಮಿನ ನೂರಾರು ಜನ ರಾತ್ರಿ 10 ಗಂಟೆ ಸುಮಾರಿಗೆ ಕಾವಲ್‌ ಬೈರಸಂದ್ರದಲ್ಲಿರುವ ಶ್ರೀನಿವಾಸಮೂರ್ತಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅದನ್ನು ಚಿತ್ರೀಕರಿಸಲು ಬಂದ ಸಾರ್ವಜನಿಕರ ಮೊಬೈಲ್‌ಗ‌ಳನ್ನು ಕಿತ್ತೆಸೆದಿದ್ದಾರೆ. ಅಲ್ಲದೆ, ಆ ರಸ್ತೆಯಲ್ಲಿರುವ ಐದಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳ ಮೇಲೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್‌ ಠಾಣೆ ಮುಂದೆ ಜಮಾವಣೆ
ಅಲ್ಲದೆ, ನೂರಾರು ಮಂದಿ ಸ್ಥಳೀಯರು ಕೆ.ಜಿ.ಹಳ್ಳಿ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತ ಗುಂಪನ್ನು ಚದುರಿಸಲು ಹರಸಾಹಸ ಪಡುತ್ತಿದ್ದ ಪೊಲೀಸರು, ‘ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೊಲೀಸರ ಕರ್ತವ್ಯಕ್ಕೆ ಅವಕಾಶ ನೀಡಿ. ಎಲ್ಲರೂ ಮನೆಗಳಿಗೆ ತೆರಳಿ’ ಎಂದು ಮನವಿ ಮಾಡಿದರು. ಆದರೂ ಕೆಲವರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಆಗ ಅನಿವಾರ್ಯವಾಗಿ ಪೊಲೀಸರು ಗುಂಪು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ಪೊಲೀಸರು ಠಾಣೆಯಿಂದ ಹೊರಗೆ ಬರದಂತೆ ಪ್ರತಿಭಟನಾಕಾರರು ಜಮಾಯಿಸಿದ್ದರಿಂದ ಅಕ್ಕ ಪಕ್ಕದ ಠಾಣೆಗಳಿಂದ ಹೆಚ್ಚುವರಿ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು.
ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಶಾಸಕ ಜಮೀರ್‌ ಅಹ್ಮದ್‌, ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿ ಪ್ರತಿಭಟನಾ ನಿರತರ ಜತೆ ಮಾತುಕತೆ ನಡೆಸಿದರು. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಗುರುತಿಸಿದ್ದಾರೆ. ಸದ್ಯದಲ್ಲೇ ಅವರನ್ನು ಬಂಧಿಸುತ್ತಾರೆ. ಆರೋಪಿಗಳ ಬಂಧನಕ್ಕೆ ಮೂರು ಪೊಲೀಸರ ತಂಡ ತೆರಳಿದೆ ಎಂದು ಶಾಸಕ ಜಮೀರ್‌ ಪ್ರತಿಭಟನಾ ನಿರತರಿಗೆ ಮನವರಿಕೆ ಮಾಡಿಕೊಡಲು ತಿಳಿಸಿದರು.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, “ಸಮುದಾಯದ ಬಾಂಧವರಿಗೆ ಕೇಳಿಕೊಳ್ಳುತ್ತೇನೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮಕೈಗೊಳ್ಳೋಣ. ಯಾರು ಗಲಾಟೆ ಮಾಡಿಕೊಳ್ಳುವುದು ಬೇಡ. ಪ್ರತಿಭಟನೆ, ಮತ್ತೂಂದು ಮಾಡುವುದು ಬೇಡ. ಯಾವುದೇ ಧರ್ಮದ ಬಗ್ಗೆ ಯಾರೇ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದರೂ ತಪ್ಪು. ಅದನ್ನು ನಾನು ಖಂಡಿಸುತ್ತೇನೆ. ಪೋಸ್ಟ್‌ ಹಾಕಿದವರಿಗೆ ಶಿಕ್ಷೆ ಆಗಬೇಕು. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಆಗ್ರಹಿಸುತ್ತೇನೆ,’ ಎಂದಿದ್ದಾರೆ.

ಖಾತೆ ಹ್ಯಾಕ್‌?
ನನ್ನ ಫೇಸ್‌ಬುಕ್‌ ಖಾತೆ ಹ್ಯಾಕ್‌ ಆಗಿದೆ. ಯಾರೋ ದುಷ್ಕರ್ಮಿಗಳು ನನ್ನ ಖಾತೆ ಹ್ಯಾಕ್‌ ಮಾಡಿ ಕೆಟ್ಟ ಪೋಸ್ಟ್‌ ಹಾಕಿದ್ದಾರೆ. ದುಷ್ಕರ್ಮಿಗಳ ವಿರುದ್ಧ ನಾನು ದೂರು ದಾಖಲಿಸುತ್ತೇನೆ ಎಂದು ಶಾಸಕರ ಸಂಬಂಧಿ ನವೀನ್‌ ಪೋಸ್ಟ್‌ ಮಾಡಿದ್ದಾರೆ.

ಆರೋಪಿ ಬಂಧನ?
ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಬಂಧಿತನ ಹೆಸರನ್ನು ಹೇಳಲು ಅಧಿಕಾರಿಗಳು ನಿರಾಕರಿಸಿದ್ದಾರೆ.

ಸಿಎಂಗೆ ಮಾಹಿತಿ ನೀಡಿದ ಗೃಹ ಸಚಿವ ಬಸಬರಾಜ್ ಬೊಮ್ಮಾಯಿ
ಬೆಂಗಳೂರು: ಕಾವಲ್ ಬೈರಸಂದ್ರದಲ್ಲಿ ನಡೆದ ಗಲಾಟೆ ಪ್ರಕರಣದ ಕುರಿತು ಗೃಹ ಸಚಿವ ಬಸಬರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಮಾಹಿತಿ ನೀಡಿದ್ದಾರೆ.  ಯಾರೇ ಆಗಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಬಂದೊ ಬಸ್ತ್ ಮಾಡುವಂತೆ ಹಾಗೂ ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಈಗ ನಡೆಯುತ್ತಿರುವ ದಾಂಧಲೇ, ಬೆಂಕಿ ಹಚ್ಚುವುದು, ಲೂಟಿ ಮಾಡುವುದನ್ನು ಸಹಿಸುವುದಿಲ್ಲ. ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಹೆಚ್ಚುವರಿ ಪೊಲೀಸ್ ನಿಯೋಜನೆಗೆ ಸೂಚನೆ ನೀಡಿದ್ದೇನೆ. ಯಾರು ಎಷ್ಟೇ ದೊಡ್ಡವರಿದ್ದರೂ ಈ ಪುಂಡಾಟಿಕೆಯನ್ನು ಸಹಿಸುವುದಿಲ್ಲ. ದಾಂಧಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ. ಇತರ ಪ್ರದೇಶಗಳಲ್ಲಿಯೂ ಜನರು ಯಾವುದೇ ರೀತಿಯ ಉದ್ವೇಗಕ್ಕೆ ಒಳಗಾಗಬಾರದು.
ಬಸವರಾಜ್ ಬೊಮ್ಮಾಯಿ, ಗೃಹ ಸಚಿವ.

ಪೊಲೀಸ್ ಕ್ವಾಟ್ರಸ್ ಮೇಲೆ ಬೆಂಕಿ; ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಗಾಳಿಯಲ್ಲಿ ಗುಂಡು
ಕಿಡಿಗೇಡಿಗಳು ಪೊಲೀಸ್ ಕ್ವಾಟ್ರಸ್, ವಾಹನ ಹಾಗೂ ಅಕ್ಕ ಪಕ್ಕದ ಮನೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ ಜೊತೆಗೆ ಮನೆಗಳ ಮೇಲೆ ಬೆಂಕಿ ಹಚ್ಚುವ ಕೃತ್ಯವನ್ನು ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಗಲಭೆಗೆ ಓರ್ವ ಬಲಿ ?
ಬೆಂಗಳೂರು: ಕಾವಲ್ ಬೈರಸಂದ್ರದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಓರ್ವ ಮೃತ ಪಟ್ಟಿದ್ದಾನೆ ಎಂದು ವರದಿಯಾಗಿದೆ. ಗಲಭೆಯಲ್ಲಿ ಪೊಲೀಸರ ಫೈರಿಂಗ್ ಗೆ ಓರ್ವ ಮೃತ ಪಟ್ಟಿದ್ದಾನೆ. ಗಲಭೆಯನ್ನು ನಿಯಂತ್ರಿಸಲು ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.