ಪಿಎಂ ಕಿಸಾನ್ ಯೋಜನೆ: 10ನೇ ಕಂತಿನ ಹಣ ಬಿಡುಗಡೆ


Team Udayavani, Jan 1, 2022, 12:26 PM IST

ಪಿಎಂ ಕಿಸಾನ್ ಯೋಜನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆಗೊಳಿಸಿದ್ದು, ಈ 10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 3426401 ರೈತರಿಗೆ 685 ಕೋಟಿ 28 ಲಕ್ಷ 2ಸಾವಿರ ರೂ. ಹಣ ಬಿಡುಗಡೆಯಾಗಿದೆ.

2018-19 ರಿಂದ ಜ.1, 2022 ರವರೆಗೆ 10 ನೇ ಕಂತಿನವರೆಗೆ ರಾಜ್ಯದ ಒಟ್ಟು 54 ಲಕ್ಷದ 52 ಸಾವಿರ ರೈತ ಕುಟುಂಬಗಳಿಗೆ ಒಟ್ಟು 8707 ಕೋಟಿ 97 ಲಕ್ಷ ರೂ. ಮೊತ್ತ ಬಿಡುಗಡೆಯಾದಂತಾಗಿದೆ‌.

ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕಳೆದ 2019 ಫೆ.1ರಿಂದ ಅನುಷ್ಠಾನಗೊಳಿಸಿದ್ದು ,ಯೋಜನೆಯಡಿ ವಾರ್ಷಿಕ ರೂ 6000 ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಈ  ಅನುದಾನವನ್ನು ರೂ .2000 ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ಇದನ್ನು ನೀಡಲಾಗುತ್ತಿದೆ. 2850 ಕೋಟಿ 54 ಲಕ್ಷ ರೂ.ಗಳಷ್ಟು ಕರ್ನಾಟಕ ಸರ್ಕಾರದಿಂದ  ಹೆಚ್ಚುವರಿಯಾಗಿ ರೈತರಿಗೆ ಹಣ ಪಾವತಿಯಾಗಿದೆ.

ಇದನ್ನೂ ಓದಿ:ಹೊಸ ದಾಖಲೆ :ಒಂದೇ ದಿನ 60 ಸಾವಿರ ಮೆಟ್ರಿಕ್‌ ಟನ್‌ ಕಬ್ಬು ನುರಿಸಿದ ನಿರಾಣಿ ಶುಗರ್ಸ್

ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಆಧಾರ್‌ ಆಧಾರಿತ ಡಿಬಿಟಿ ಮುಖಾಂತರ ಮಾಡಬೇಕೆಂದು ಸೂಚಿಸಲಾಗಿದ್ದು, ಎಲ್ಲಾ ರಾಜ್ಯಗಳ ಪೈಕಿ , ಕರ್ನಾಟಕ ರಾಜ್ಯವು ಅತಿ ಹೆಚ್ಚು ಶೇಕಡಾವಾರು ಆಧಾರ್‌ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ 2021ರ ವರ್ಷದ ಫೆಬ್ರುವರಿಯಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿ ದೊರೆತಿದೆ. ನಿರಂತರ ಮೇಲ್ವಿಚಾರಣೆಯ ಭಾಗವಾಗಿ ಯೋಜನೆಯ ಫಲಾನುಭವಿಗಳಾಗಿರುವ ರೈತ ಕುಟುಂಬಗಳ ಅರ್ಹತೆಯನ್ನು ರಾಜ್ಯದಿಂದ ಆಗಿದಾಗ್ಗೆ ಪರಿಶೀಲಿಸಲಾಗುತ್ತಿದೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.