ಕೊಡಗಿಗೆ ಇಂದೇ 100 ಕೋಟಿ ಬಿಡುಗಡೆ: ಬಿಎಸ್ವೈ
Team Udayavani, Aug 30, 2019, 3:04 AM IST
ಮಡಿಕೇರಿ: ಕೊಡಗಿನಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ಹಾನಿಯಾಗಿದ್ದು, ಈ ಸಂಬಂಧ ಘೋಷಿಸಲಾಗಿದ್ದ 536 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ನಲ್ಲಿ ಪ್ರಥಮ ಹಂತದಲ್ಲಿ 100 ಕೋಟಿ ರೂ.ಗಳನ್ನು ಶುಕ್ರವಾರವೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಕೊಡಗಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗೆ ಆಗಮಿಸಿದ ಅವರು, ಕೂಡಿಗೆ ಸೈನಿಕ ಶಾಲೆಯ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲೆಯಲ್ಲಿ ಉಂಟಾದ ಹಾನಿಗಳ ಬಗ್ಗೆ ಮಾಹಿತಿ ಒದಗಿಸಿದರು. ಸಚಿವರುಗಳಾದ ಆರ್.ಅಶೋಕ್, ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಹಾಜರಿದ್ದರು.
ಸಭೆಯ ಬಳಿಕ ಅವರು ನೆಲ್ಯಹುದಿಕೇರಿಯ ಪರಿಹಾರ ಕೇಂದ್ರಕ್ಕೆ ತೆರಳಿ, ಸಂತ್ರಸ್ತರ ಅಹವಾಲು ಆಲಿಸಿದರು. ಕರಡಿಗೋಡು, ಕುಂಬಾರಗುಂಡಿ ಮತ್ತಿತರ ಪ್ರವಾಹ ಪೀಡಿತ ಗ್ರಾಮಗಳ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ