ಬಳ್ಳಾರಿಯ ಕೊಟ್ಟೂರಿನಲ್ಲಿ 12 ಸೆಂ.ಮೀ. ಮಳೆ

Team Udayavani, Oct 20, 2019, 3:00 AM IST

ಬೆಂಗಳೂರು: ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಬಹುತೇಕ ಎಲ್ಲೆಡೆ ಮಳೆಯಾಯಿತು. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ರಾಜ್ಯದಲ್ಲಿಯೇ ಅಧಿಕ, 12 ಸೆಂ.ಮೀ. ಮಳೆ ಸುರಿಯಿತು. ಕಾರವಾರದಲ್ಲಿ ರಾಜ್ಯದಲ್ಲಿಯೇ ಗರಿಷ್ಠ 34 ಡಿ.ಸೆ.ಮತ್ತು ಬೀದರ್‌ನಲ್ಲಿ ಕನಿಷ್ಠ 19 ಡಿ.ಸೆ.ತಾಪಮಾನ ದಾಖಲಾಯಿತು.

ಇದೇ ಅವಧಿಯಲ್ಲಿ ಹಗರಿಬೊಮ್ಮನಹಳ್ಳಿಯಲ್ಲಿ 10, ಮುನೀರಾಬಾದ್‌ನಲ್ಲಿ 9, ಇಂಡಿಯಲ್ಲಿ 8, ಗೇರುಸೊಪ್ಪಾ, ಗೋಕರ್ಣ, ಅಂಕೋಲಾ, ಮಂಗಳೂರು, ಹೊನ್ನಾವರ, ಬಸವನ ಬಾಗೇವಾಡಿ, ತ್ಯಾಗರ್ತಿ, ಕಮ್ಮರಡಿಗಳಲ್ಲಿ ತಲಾ 7 ಸೆಂ.ಮೀ.ಮಳೆಯಾದ ವರದಿಯಾಗಿದೆ. ಸೋಮವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದೆಲ್ಲೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ