125 ಗಿಗಾವ್ಯಾಟ್ ವಿದ್ಯುತ್ ಉತ್ಪಾದನೆ: ಖೂಬಾ
Team Udayavani, Aug 17, 2021, 7:30 AM IST
ಬೀದರ್: ವಿದ್ಯುತ್ ಉತ್ಪಾದನೆಯಲ್ಲಿ ಈಗಾಗಲೇ ಸ್ವಾವಲಂಬನೆ ಸಾಧಿಸಿರುವ ಭಾರತದಲ್ಲಿ 2030ರ ವೇಳೆಗೆ ಸೋಲಾರ್, ನೀರು, ಗಾಳಿ ಮತ್ತು ಬಯೋಮಾಸ್ ಸೇರಿ ವಿವಿಧ ನವೀಕರಿಸಬಹುದಾದ ವಿದ್ಯುತ್ ಅನ್ನು 450 ಗಿಗಾವ್ಯಾಟ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಸರಕಾರದ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.
ನಗರದಲ್ಲಿ ಸೋಮವಾರ ನಡೆದ ಬಿಜೆಪಿ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೋದಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಯೂರಿಯಾ ಕೊರತೆ ಎದುರಾಗಿಲ್ಲ. ಮುಂದಿನ 3-4 ತಿಂಗಳಲ್ಲಿ 4 ಕಂಪೆನಿಗಳು ಯೂರಿಯಾ ಉತ್ಪಾದಿಸಲಿವೆ. ಇನ್ನು ಮುಂದೆ ಎಂದಿಗೂ ಯೂರಿಯಾ ಕೊರತೆಯಾಗದು. ನ್ಯಾನೋ ತಂತ್ರಜ್ಞಾನದ ಮೂಲಕ ಯೂರಿಯಾ (ಲಿಕ್ವಿಡ್ ಯೂರಿಯಾ) ತಯಾರಿಸಲಾಗುತ್ತಿದೆ. ಜತೆಗೆ ನ್ಯಾನೋ ತಂತ್ರಜ್ಞಾನದ ಮೂಲಕ ಡಿಎಪಿಯನ್ನೂ ಉತ್ಪಾದಿಸುವ ಉದ್ದೇಶ ಸರಕಾರಕ್ಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್