ಕೋವಿಡ್ ಮೂರನೇ ಅಲೆ ಎದುರಿಸಲು ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ: ಸಚಿವ ಸುಧಾಕರ್

Team Udayavani, Jul 11, 2021, 4:21 PM IST

ಕೋವಿಡ್ ಮೂರನೇ ಅಲೆ ಎದುರಿಸಲು ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ: ಸಚಿವ ಸುಧಾಕರ್

ಬೆಂಗಳೂರು: ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆತಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದರು.

ಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುನೈಟೆಡ್‌ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕಾ ವಿತರಣೆಯ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

ಯುವ ವೈದ್ಯರ ತಂಡ ಕಲಬುರಗಿಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ಬೆಂಗಳೂರಿನಲ್ಲೂ ಆಸ್ಪತ್ರೆಯನ್ನು ಪ್ರಾರಂಭಿಸಿರುವುದು ಬಹಳ ಸಂತಸದ ವಿಷಯ. ಕೋವಿಡ್ ಸಾಂಕ್ರಾಮಿಕ ಹೆಚ್ಚಾಗಿದ್ದಾಗ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಉಂಟಾಗಿತ್ತು. ಆ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳು ನೀಡಿದ ಸಹಕಾರ ಬಹಳ ಶ್ಲಾಘನೀಯ. ಕಲಬುರಗಿ ಜಿಲ್ಲಾ ಕೇಂದ್ರದಲ್ಲಿ ಯುನೈಟೆಡ್‌ ಆಸ್ಪತ್ರೆ ಸಾವಿರಾರು ಕರೋನಾ ಪೀಡಿತರಿಗೆ ಉತ್ತಮ ಚಿಕಿತ್ಸೆ ನೀಡಿದೆ. ರಾಜ್ಯ ಸರಕಾರ ದೇಶದಲ್ಲೇ ರಾಜ್ಯವನ್ನು ಆರೋಗ್ಯ ಕ್ಷೇತ್ರದಲ್ಲಿ ಮಾಧರಿ ರಾಜ್ಯವನ್ನಾಗಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಈ ವಿಷಯದಲ್ಲಿ ಸಫಲತೆಯನ್ನು ಪಡೆಯಲು ಖಾಸಗಿ ಆಸ್ಪತ್ರೆಗಳ ಸಹಕಾರ ಬಹಳ ಅಗತ್ಯ ಎಂದರು.

ಇದನ್ನೂ ಓದಿ:ಕಾಂಗ್ರೆಸ್ ಪಕ್ಷಕ್ಕೆ ಡಾ.ಅಂಬೇಡ್ಕರ್ ಅವರ ಹೆಸರು ಹೇಳಿ ಮತ ಕೇಳುವ ಹಕ್ಕಿಲ್ಲ: ಸಿ.ಟಿ.ರವಿ

ಕೇಂದ್ರ ಸರಕಾರ ಇತ್ತೀಚಿನ ಸಚಿವ ಸಂಫುಟ ಸಭೆಯಲ್ಲಿ ಮುಂದಿನ ಸಂಭವನೀಯ ಮೂರನೇ ಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ 23 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಈ ಹಣದಲ್ಲಿ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆಯಲಿದ್ದು, ರಾಜ್ಯದಲ್ಲಿ ಮಕ್ಕಳ ವಿಭಾಗದ ಸಾಮರ್ಥ್ಯವನ್ನು ಹೆಚ್ಚಿಸಲು ಬಳಸಿಕೊಳ್ಳಲಾಗುವುದು. ಸನ್ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮೂರನೇ ಅಲೆಗೆ ಅಗತ್ಯವಿರುವ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಜಯನಗರ ಭಾಗದಲ್ಲಿ ಮತ್ತೊಂದು ನೂತನ ಆಸ್ಪತ್ರೆ ಪ್ರಾರಂಭವಾಗುತ್ತಿರುವುದು ಬಹಳ ಸಂತಸದ ವಿಷಯ. ಕರೋನಾ ಸಂಕಷ್ಟ ಕಾಲದಲ್ಲಿ ಆಸ್ಪತ್ರೆ ಸೌಲಭ್ಯಗಳ ದೊರೆಯದೆ ಇದ್ದಂತಹ ಸಂಧರ್ಭದಲ್ಲಿ ಇದರ ಮಹತ್ವವನ್ನು ನಾವು ತಿಳಿದುಕೊಂಡಿದ್ದೇವೆ. ಹೆಲ್ತ್‌ ಕಾರ್ಡ್ ಗಳ ಮೂಲಕ ಹಾಗೂ ನಿರ್ದಿಷ್ಟ ದರವನ್ನು ನಿಗದಿಪಡಿಸುವ ಮೂಲಕ ಉತ್ತಮ ಸೇವೆಯನ್ನು ನೀಡುವ ಭರವಸೆಯನ್ನು ಇಲ್ಲಿನ ವೈದ್ಯಕೀಯ ಮಂಡಳೀ ನೀಡಿರುವುದು ಸಂತಸದ ವಿಷಯ ಎಂದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.