17 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಲ ಸನ್ನಿಹಿತ

Team Udayavani, Sep 15, 2019, 3:00 AM IST

Udayavani Kannada Newspaper

ಬೆಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಸೇರಿ ರಾಜ್ಯದ 11 ಜಿಲ್ಲೆಗಳ 17 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಲ ಸನ್ನಿಹಿತವಾಗಿದೆ.

ಈ ವರ್ಷದ ಡಿಸೆಂಬರ್‌ನಲ್ಲಿ ಅವಧಿ ಮುಕ್ತಾಯ ವಾಗಲಿರುವ ಶಿವಮೊಗ್ಗ ಜಿಲ್ಲೆ ಜೋಗ ಕಾರ್ಗಲ್‌ ಪಟ್ಟಣ ಪಂಚಾಯಿತಿ, ಬಳ್ಳಾರಿ ಜಿಲ್ಲೆಯ ಕಂಪ್ಲಿ ಪುರಸಭೆ ಹಾಗೂ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸೇರಿ ಹೈಕೋರ್ಟ್‌ನಲ್ಲಿ ವ್ಯಾಜ್ಯ ಇತ್ಯರ್ಥಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸದ್ಯದಲ್ಲಿಯೇ ಚುನಾವಣೆ ನಡೆಸಬೇಕಾಗಿದ್ದು, ಈ ಸಂಬಂಧ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಚುನಾವಣೆ ನಡೆಯಲಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗವು ಸೆ.13 ರಂದು ತುರ್ತು ಸುತ್ತೋಲೆ ಹೊರಡಿಸಿದೆ.

ಮತದಾರರ ಪಟ್ಟಿ, ಮತದಾನ ಕೇಂದ್ರಗಳು, ಮತದಾನ ಸಿಬ್ಬಂದಿ ನೇಮಕ, ಚುನಾವಣಾಧಿಕಾರಿಗಳ ನೇಮಕ, ಇಎಂಗಳ ಸಂಗ್ರಹಣೆ, ಚುನಾವಣಾ ವೆಚ್ಚ ಅಧಿಕಾರಿಗಳ ನೇಮಕ, ಚುನಾವಣಾ ಸಾಮಗ್ರಿಗಳ ಸಂಗ್ರಹಣೆ ಹಾಗೂ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಪೂರ್ವಸಿದ್ಧತೆಗಳನ್ನು ಮಾಡಿಕೊಂಡು ಆಯೋಗಕ್ಕೆ ವರದಿ ಸಲ್ಲಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ರಾಜ್ಯದ ಒಟ್ಟು 270 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 2018ರ ಅಗಸ್ಟ್‌ನಲ್ಲಿ 103 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗಿದೆ. 2019ರ ಮಾರ್ಚ್‌ರಿಂದ ಜೂನ್‌ ವರೆಗೆ ಅವಧಿ ಮುಕ್ತಾಯಗೊಳ್ಳಲಿರುವ 106 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಈ ವರ್ಷದ ಮೇನಲ್ಲಿ 63 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗಿತ್ತು.

ಈ ಮಧ್ಯೆ, ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆಯನ್ನು ಈ ವರ್ಷದ ನವೆಂಬರ್‌ 15ರೊಳಗೆ ಪೂರ್ಣಗೊಳಿಸುವಂತೆ ಅ.28ರಂದು ಹೈಕೋರ್ಟ್‌ ಆದೇಶ ನೀಡಿದೆ. ಶಾಸಕರು ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಹೊಸಕೋಟೆ, ಚಿಕ್ಕಬಳ್ಳಾಪುರ ಹಾಗೂ ಹುಣಸೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗಳ ಜತೆಗೆ ಅಲ್ಲಿನ ನಗರಸಭೆಗೂ ಚುನಾವಣೆ ನಡೆಯಲಿದೆ.

ಚುನಾವಣೆ ನಡೆಯಬೇಕಿರುವ ನಗರ ಸ್ಥಳೀಯ ಸಂಸ್ಥೆಗಳು
ಮಹಾನಗರ ಪಾಲಿಕೆ: ಮಂಗಳೂರು, ದಾವಣಗೆರೆ.
ನಗರಸಭೆ: ಹೊಸಕೋಟೆ, ಕನಕಪುರ, ಕೋಲಾರ, ಮುಳಬಾಗಿಲು, ಕೆ.ಜಿ.ಎಫ್, ಚಿಕ್ಕಬಳ್ಳಾಪುರ, ಗೌರಿಬಿದನೂರು, ಚಿಂತಾಮಣಿ, ಹುಣಸೂರು.
ಪುರಸಭೆ: ಮಾಗಡಿ, ಬೀರೂರು, ಕಂಪ್ಲಿ.
ಪಟ್ಟಣ ಪಂಚಾಯ್ತಿ: ಜೋಗ ಕಾರ್ಗಲ್‌, ಕುಂದಗೋಳ, ಕೂಡ್ಲಿಗಿ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.