Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಮುಂದಿನ 5 ದಿನಗಳ ಕಾಲ ಬಹುತೇಕ ಕಡೆ 2-3 ಡಿ.ಸೆ. ಉಷ್ಣಾಂಶ ಏರಿಕೆ?

Team Udayavani, Apr 18, 2024, 6:50 AM IST

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯಾದ್ಯಂತ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಒಳನಾಡು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ 35ರಿಂದ 38 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿತ್ತು. ಇದೀಗ ರಾಜ್ಯದ ಉತ್ತರ ಕರ್ನಾಟಕದಲ್ಲಿ ಮತ್ತೆ ತಾಪಮಾನ ಏರಿಕೆಯಾಗಿದ್ದು, ಬುಧವಾರ ಕಲಬುರಗಿಯಲ್ಲಿ 41.4, ರಾಯಚೂರು 40.8, ಬೆಂಗಳೂರು 36.7, ಬಾಗಲಕೋಟೆಯಲ್ಲಿ 39.8, ಮಂಡ್ಯದಲ್ಲಿ 38.6, ದಾವಣಗೆರೆಯಲ್ಲಿ 39.7, ಚಾಮರಾಜನಗರ 37.4, ಚಿತ್ರದುರ್ಗ 38.5 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಉಷ್ಣಾಂಶ ಏರಿಕೆ ಏಕೆ?
ಮರಾಠವಾಡದಿಂದ ದಕ್ಷಿಣ ಒಳಭಾಗದ ಕರ್ನಾಟಕದವರೆಗಿನ ಟ್ರಫ್ ಈಗ ದಕ್ಷಿಣ ವಿದರ್ಭದಿಂದ ದಕ್ಷಿಣ ಒಳಭಾಗಕ್ಕೆ ಹಾದು ಹೋಗುತ್ತದೆ. ಕರ್ನಾಟಕವು ಮರಾಠವಾಡದಿಂದ ಮತ್ತು ಉತ್ತರ ಆಂತರಿಕ ಕರ್ನಾಟಕದ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಮನ್ನಾರ್‌ ಕೊಲ್ಲಿಯಿಂದ ದಕ್ಷಿಣ ತೆಲಂಗಾಣದವರೆಗೆ ತಮಿಳುನಾಡು ಮತ್ತು ರಾಯಲಸೀಮಾದ ಒಳಭಾಗದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ. ಎತ್ತರದಲ್ಲಿ ಒಂದು ಟ್ರಫ್ ಹಾದು ಹೋಗುತ್ತದೆ.

ತಮಿಳುನಾಡಿನ ಉತ್ತರ ಒಳಭಾಗದಲ್ಲಿ ಸಮುದ್ರ ಮಟ್ಟದಿಂದ 1.5 ಕಿ.ಮೀ. ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಕಡಿಮೆಯಾಗಿದೆ ಎಂದು ಗುರುತಿಸಲಾಗಿದೆ. ಇದರಿಂದ ಗರಿಷ್ಠ ಉಷ್ಣಾಂಶವು 2ರಿಂದ 3 ಡಿ.ಸೆ. ಏರಿಕೆಯಾಗುವ ಲಕ್ಷಣ ಗೋಚರಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿವಿಧೆಡೆ ಮಳೆಯಾಗುವ ಸಾಧ್ಯತೆ
ಗುರುವಾರ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೆೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧಯತೆಯಿದೆ. ಎ. 18ರಂದು ಧಾರವಾಡ, ಗದಗ, ಬೆಳಗಾವಿ, ವಿಜಯಪುರ ಮತ್ತು ಹಾವೇರಿ ಜಿಲ್ಲೆ ಗಳಲ್ಲಿ ಹಾಗೂ ಎ. 19ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಕರ್ನಾಟಕದ ಜಿಲ್ಲೆಗಳು, ಬೀದರ್‌, ಕಲಬುರಗಿ, ವಿಜಯಪುರ, ಗದಗ ಮತ್ತು ರಾಯಚೂರು, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಿಡಿಲು, ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಗಳಿವೆ. ಜತೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.