2 ಪ್ರತ್ಯೇಕ ಭೀಕರ ಅಪಘಾತಗಳು : 5 ಬಲಿ ; ಮೂವರು ಗಂಭೀರ
Team Udayavani, Jul 17, 2018, 10:43 AM IST
ತುಮಕೂರು / ಕೋಲಾರ: ರಾಜ್ಯದಲ್ಲಿ ನಡೆದ 2 ಪ್ರತ್ಯೇಕ ಭೀಕರ ಅಪಘಾತದಲ್ಲಿ ದಂಪತಿ ಸೇರಿ ಐವರು ಬಲಿಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಳಬಾಗಿಲಿನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸೋಮವಾರ ತಡರಾತ್ರಿ ಟ್ರ್ಯಾಕ್ಟರೊಂದು ವ್ಯಾಗನರ್ ಕಾರಿಗೆ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದು, ಹಿಂದಿನ ಸೀಟಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರು ಶಿವು(24)ಮತ್ತು ಕಿರಣ್ (23) ಎಂದು ತಿಳಿದು ಬಂದಿದೆ. ಘಟನೆಯ ಬಳಿಕ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರಿನ ಶಿರಾದ ದೊಡ್ಡ ಆಲದ ಮರದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಲಾರಿಯೊಂದು ಢಿಕ್ಕಿಯಾದ ಪರಿಣಾಮ ಕ್ಯಾಂಟರ್ನಲ್ಲಿದ್ದ ದಂಪತಿ ಮತ್ತು ಚಾಲಕ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರು ಹನುಮಂತರಾಜು (42) ಪತ್ನಿ ರಾಧಾ(35)ಮತ್ತು ಚಾಲಕ ಲೋಕೇಶ್ ಎಂದು ತಿಳಿದು ಬಂದಿದೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ