ಹೊಸನಗರದಲ್ಲಿ 20 ಸೆಂ.ಮೀ. ಮಳೆ
Team Udayavani, Aug 5, 2019, 3:00 AM IST
ಬೆಂಗಳೂರು: ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಎಲ್ಲೆಡೆ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಯಿತು. ಹೊಸನಗರದಲ್ಲಿ ರಾಜ್ಯದಲ್ಲಿಯೇ ಅಧಿಕ 20 ಸೆಂ.ಮೀ.ಮಳೆ ಸುರಿಯಿತು. ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಕರಾವಳಿಯಲ್ಲಿ ಕಡಲ್ಕೊರೆತ: ಕರಾವಳಿಯಲ್ಲೂ ಮಳೆ ಆರ್ಭಟ ಜೋರಾಗಿದ್ದು, ವಿವಿಧೆಡೆ ಕಡಲ್ಕೊರೆತ ಮುಂದುವರಿದಿದೆ. ಕದ್ರಾ ಜಲಾಶಯ ಭರ್ತಿಯಾಗಿದ್ದು, ಐದು ಕ್ರಸ್ಟ್‌ಗೇಟ್‌ಗಳ ಮೂಲಕ ನೀರು ಹೊರ ಬಿಡಲಾಗಿದೆ. ಕಾಳಿ ನದಿ ದಡದ ಪಕ್ಕದ ಗ್ರಾಮಗಳಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಕಾರವಾರದ ಪಂಚರಿಶಿವಾಡ ಸೇರಿದಂತೆ ನ್ಯೂಕೆಎಚ್‌ಬಿ ಕಾಲೋನಿ, ದೇವಳಿವಾಡ, ಪದ್ಮನಾಭ ನಗರಗಳು ಜಲಾವೃತವಾಗಿವೆ.
ಮಂಗಳೂರು ಸಮೀಪದ ಪಣಂಬೂರು, ತಣ್ಣೀರುಬಾವಿ ಬೀಚ್‌ಗಳಲ್ಲಿ ಸಮುದ್ರದ ಅಲೆಗಳ ಅಬ್ಬರ ಜೋರಾಗಿದೆ. ಅಪಾಯ ಸಂಭವಿಸದಂತೆ ಲೈಫ್‌ಗಾರ್ಡ್ ವ್ಯವಸ್ಥೆ ಕಲ್ಪಿಸಲಾಗಿದೆ. ಉಳ್ಳಾಲ, ಸೋಮೇಶ್ವರ ಉಚ್ಚಿಲ, ಚಿತ್ರಾಪುರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಎರಡು ಕುಟುಂಬಗಳನ್ನು ಸ್ಥಳಾಂತಗೊಳಿಸಲಾಗಿದೆ. ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಬಳಿ ಅಪಾಯದಲ್ಲಿರುವ ರಸ್ತೆಗೆ ಹಾಕಿರುವ ಕಲ್ಲುಗಳು ಕೊರೆತಕ್ಕೆ ಕುಸಿಯುತ್ತಿವೆ. ನ್ಯೂ ಉಚ್ಚಿಲದಲ್ಲಿ ಕಲ್ಲುಗಳು ಸಮುದ್ರ ಪಾಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಸಹೋದರಿಯ ಮದುವೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು : ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ
ಚಿಕ್ಕೋಡಿ : ಕಡು ಬಡತನದಲ್ಲಿ ಹುಟ್ಟಿ ಅರೋಗ್ಯ ಸೇವೆಗೆ ಮುಂದಾದ ಗಡಿ ಭಾಗದ ಯುವಕ
ಬೇಡರಶಿವನಕೆರೆ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷ : ಅರಣ್ಯ ಸಿಬಂದಿಗಳಿಂದ ಕಾರ್ಯಾಚರಣೆ
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಐಪಿಎಲ್ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ಗೆ 17 ರನ್ ಗೆಲುವು
ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್ಪಿ ನಿರ್ಧಾರ
ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ