Bengaluru city ;250 ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಲು ಸಿಎಂ ಸೂಚನೆ

Team Udayavani, Jun 12, 2023, 9:15 PM IST

siddanna

ಬೆಂಗಳೂರು: ಬೆಂಗಳೂರಿನ ಪ್ರತಿ ವಾರ್ಡ್‌ಗೆ ಒಂದು ಔಟ್‌ಲೆಟ್‌ನಂತೆ ಸಬ್ಸಿಡಿ ಆಹಾರ ನೀಡುವ ಕನಿಷ್ಠ 250 ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದಿರಾ ಕ್ಯಾಂಟೀನ್ ಸೇವೆ ಮತ್ತು ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

”ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಿಸಲು ನಾವು ಚರ್ಚೆ ನಡೆಸಿದ್ದೇವೆ. ಪ್ರತಿ ವಾರ್ಡ್‌ನಲ್ಲಿ (ಬೆಂಗಳೂರಿನ) ಒಂದು ಇಂದಿರಾ ಕ್ಯಾಂಟೀನ್ ತೆರೆಯಬೇಕು. ಬೆಂಗಳೂರು ನಗರದಲ್ಲಿ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಸಿದ್ದರಾಮಯ್ಯನವರ ದೊಡ್ಡ ಜನಪರ ಯೋಜನೆಯಾಗಿ ಆಗಿ ಆರಂಭವಾದ ಇಂದಿರಾ ಕ್ಯಾಂಟೀನ್‌ಗಳನ್ನು ಮೊದಲು 2013-18ರ ನಡುವೆ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪರಿಚಯಿಸಲಾಗಿತ್ತು.ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಈಗಿರುವ ಕ್ಯಾಂಟೀನ್‌ಗಳಿಗೆ ಕಾಯಕಲ್ಪ ನೀಡಿ ರಾಜ್ಯಾದ್ಯಂತ ವಿಸ್ತರಿಸುವುದಾಗಿ ಭರವಸೆ ನೀಡಿತ್ತು.

ಇಲ್ಲಿಯವರೆಗೆ ನಗರ ಪಾಲಿಕೆಯು ಶೇ.70 ರಷ್ಟು ವೆಚ್ಚವನ್ನು ಭರಿಸುತ್ತಿತ್ತು ಮತ್ತು ಉಳಿದ ಶೇ.30 ಅನ್ನು ಸರ್ಕಾರವು ತೆಗೆದುಕೊಳ್ಳುತ್ತದೆ, ಆದರೆ ಇನ್ನು ಮುಂದೆ ಎರಡೂ ಘಟಕಗಳು ತಲಾ 50 ಪ್ರತಿಶತವನ್ನು ಭರಿಸಲಿವೆ ಎಂದು ಸಿಎಂ ಹೇಳಿದರು.

“ಬೆಂಗಳೂರು ಹೊರತುಪಡಿಸಿ ಇತರ ಸ್ಥಳಗಳಲ್ಲಿ, ಸರ್ಕಾರವು ಶೇಕಡಾ 70 ರಷ್ಟು ವೆಚ್ಚವನ್ನು ಭರಿಸಲಿದೆ, ಉಳಿದ ಶೇಕಡಾ 30 ರಷ್ಟು ಅಲ್ಲಿನ ಸ್ಥಳೀಯ ನಾಗರಿಕ ಸಂಸ್ಥೆಗಳು ಭರಿಸಲಿವೆ” ಎಂದು ಸಿದ್ದರಾಮಯ್ಯ ಹೇಳಿದರು, ಹೊಸದಾಗಿ ಕ್ಯಾಂಟೀನ್ ತೆರೆಯಬೇಕಾದ ಸ್ಥಳಗಳ ಪಟ್ಟಿಯನ್ನು ಕೇಳಿದ್ದೇನೆ ಎಂದು ತಿಳಿಸಿದರು.

ಹೊಸ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿ, ನಂತರ ಮೆನು ಕೂಡ ಬದಲಾಗಲಿದೆ ಎಂದು ಹೇಳಿದರು. ಪ್ರಮಾಣ, ಗುಣಮಟ್ಟ, ಸ್ವಚ್ಛತೆ ಕಾಪಾಡಬೇಕು ಎಂದು ಸೂಚಿಸಿದರು. ಯಾವುದೇ ಬೆಲೆ ಪರಿಷ್ಕರಣೆ ಇರುವುದಿಲ್ಲ ಮತ್ತು ಕ್ಯಾಂಟೀನ್‌ಗಳಲ್ಲಿ ಅಸ್ತಿತ್ವದಲ್ಲಿರುವ ದರಗಳು ಮುಂದುವರಿಯುತ್ತವೆ ಎಂದರು.

”ವಲಯವಾರು ಅಲ್ಪಾವಧಿಯ ಟೆಂಡರ್‌ ಕರೆಯುವಂತೆ ಕೇಳಿದ್ದೇನೆ. ಟೆಂಡರ್ ಪ್ರಕ್ರಿಯೆ ಬಳಿಕ ಕಾರ್ಯಕ್ರಮವನ್ನು ಮರು ಆರಂಭಿಸುತ್ತೇವೆ. ಅಗತ್ಯವಿರುವ ಕಡೆ ರಿಪೇರಿ ಮಾಡಬೇಕು ಮತ್ತು ಕ್ಯಾಂಟೀನ್‌ಗಳು ಸುಸ್ಥಿತಿಯಲ್ಲಿರಬೇಕು, ಆಹಾರದ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಮತ್ತು ಉತ್ತರ ಕರ್ನಾಟಕದಲ್ಲಿ ಸ್ಥಳೀಯ ಆಹಾರವನ್ನು ಒದಗಿಸಲು ಸೂಚನೆಗಳೊಂದಿಗೆ ನಿಗದಿತ ಮೆನುವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಅವರು ಹೇಳಿದರು.

ಅಧಿಕಾರಿಗಳ ಪ್ರಕಾರ, ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಮಳಿಗೆಗಳ ಸ್ಥಿತಿ ಮತ್ತು ಕಾರ್ಯನಿರ್ವಹಣೆಯ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಲಾಯಿತು.

ಸಾರ್ವಜನಿಕ ಸ್ಥಳಗಳಾದ ಕಾಲೇಜುಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ತಾಲೂಕು ಕಚೇರಿಗಳು ಇತ್ಯಾದಿಗಳಲ್ಲಿ ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚನೆಗಳನ್ನು ನೀಡಲಾಯಿತು.

ಬೆಂಗಳೂರಿನಲ್ಲಿ 175 ಕ್ಯಾಂಟೀನ್‌ಗಳಿದ್ದು, 163 ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕ್ಯಾಂಟೀನ್‌ಗಳು ಉಪಹಾರವನ್ನು 5 ರೂ.ಗೆ ನೀಡುತ್ತವೆ, ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ತಲಾ 10 ರೂ.ಗೆ ಲಭ್ಯವಾಗಲಿದೆ.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.