29 ಗ್ರಾಮಗಳಲ್ಲಿ ಇನ್ನೂ ವಿದ್ಯುತ್‌ ಸಂಪರ್ಕವಿಲ್ಲ!


Team Udayavani, Feb 11, 2017, 3:45 AM IST

10-STATE-4.jpg

ವಿಧಾನಸಭೆ: ರಾಜ್ಯದ 29 ಗ್ರಾಮಗಳಿಗೆ ಇನ್ನೂ ವಿದ್ಯುತ್‌ ಸಂಪರ್ಕವಿಲ್ಲ. ಮುಂದಿನ ಆರು ತಿಂಗಳಲ್ಲಿ ಆ ಎಲ್ಲ ಗ್ರಾಮಗಳಿಗೂ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುವುದು ಎಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಶುಕ್ರವಾರ ಕಾಂಗ್ರೆಸ್‌ ಸದಸ್ಯ ವಸಂತ ಬಂಗೇರ ಅವರ ಪ್ರಶ್ನೆಗೆ ಇಂಧನ ಸಚಿವರ ಪರವಾಗಿ ಉತ್ತರ ನೀಡಿದ ಖಂಡ್ರೆ, 29 ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದರು.

ಮೆಸ್ಕಾಂ ವ್ಯಾಪ್ತಿಗೆ ಬರುವ ಶಿವಮೊಗ್ಗ ಜಿಲ್ಲೆಯ ಉರುಳುಗಲ್ಲು, ಶೆಟ್ಟಿಹಳ್ಳಿ ಮತ್ತು ಚಿತ್ರಶೆಟ್ಟಿಹಳ್ಳಿ ಗ್ರಾಮಗಳು ದಟ್ಟ ಅರಣ್ಯದಲ್ಲಿರುವುದರಿಂದ ಸಾಂಪ್ರದಾಯಿಕ ಮೂಲಗಳಿಂದ ವಿದ್ಯುತ್‌ ಸಂಪರ್ಕ ಸಾಧ್ಯವಿಲ್ಲ. ಹೀಗಾಗಿ ಕೇಂದ್ರದ ವಿಕೇಂದ್ರೀಕೃತ ವಿದ್ಯುತ್‌ ಉತ್ಪಾದನೆ ಮತ್ತು ವಿತರಣೆ (ಡಿಡಿಜಿ) ಯೋಜನೆಯಡಿ ಸೋಲಾರ್‌ ಸ್ಟಾಂಡ್‌ ಅಲೋನ್‌ ಸಿಸ್ಟಂ ಮೂಲಕ ವಿದ್ಯುತ್‌
ಸಂಪರ್ಕ ಕಲ್ಪಿಸುವ ಕೆಲಸ ಪ್ರಗತಿಯಲ್ಲಿದೆ. ಅದೇ ರೀತಿ ಚೆಸ್ಕ್ ವ್ಯಾಪ್ತಿಯ 4 ಗ್ರಾಮಗಳಿಗೂ ಡಿಡಿಜಿ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದರು.

ಉಳಿದಂತೆ ಹೆಸ್ಕಾಂ ವ್ಯಾಪ್ತಿಗೆ ಬರುವ ಉತ್ತರ ಕನ್ನಡ ಜಿಲ್ಲೆಯ 17 ಗ್ರಾಮಗಳು, ಬೆಳಗಾವಿ ಜಿಲ್ಲೆಯ 5 ಗ್ರಾಮಗಳು ದಟ್ಟ ಅರಣ್ಯ
ಪ್ರದೇಶಗಳಲ್ಲಿರುವುದರಿಂದ ಅಲ್ಲೂ ವಿದ್ಯುತ್‌ ಸಂಪರ್ಕ ಸಾಧ್ಯವಾಗಿಲ್ಲ. ಇಲ್ಲಿ ವಿದ್ಯುತ್‌ ಸಂಪರ್ಕ ಕಾಮಗಾರಿ ಪ್ರಗತಿಯಲ್ಲಿದೆ. ಆ ಪೈಕಿ
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಐದು ಗ್ರಾಮಗಳಿಗೆ ಸೋಲಾರ್‌ ಮೂಲಕ ವಿದ್ಯುತ್‌ ಒದಗಿಸಲಾಗುವುದು ಎಂದು ವಿವರಿಸಿದರು. ಬೇಸಿಗೆಯಲ್ಲಿ ವಿದ್ಯುತ್‌ ಸಮಸ್ಯೆ ಬಗೆಹರಿ ಸುವ ನಿಟ್ಟಿನಲ್ಲಿ ದಕ್ಷಿಣ ವಲಯದ ಮೂರು ವಿದ್ಯುತ್‌ ಉತ್ಪಾದನಾ ಕಂಪನಿಗಳಿಂದ 900 ಮೆಗಾವ್ಯಾಟ್‌ ವಿದ್ಯುತ್‌ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮಹಾರಾಷ್ಟ್ರದ ವಿದ್ಯುತ್‌ ಕಂಪನಿಯಿಂದ 300 ಮೆಗಾವ್ಯಾಟ್‌ ವಿದ್ಯುತ್‌ ಖರೀದಿಸಲಾಗುತ್ತಿದೆ. ದಾಮೋದರ್‌ ವ್ಯಾಲಿ ಕಾರ್ಪೋರೇಷನ್‌ನಿಂದ 450 ಮೆಗಾವ್ಯಾಟ್‌ ವಿದ್ಯುತ್‌ ಲಭ್ಯವಾಗುತ್ತಿದೆ. ಜತೆಗೆ ನವೀಕರಿಸ ಬಹುದಾದ ಇಂಧನ ಮೂಲಗಳಿಂದಲೂ ವಿದ್ಯುತ್‌ ಕೊರತೆ ನೀಗಿಸಲು ಕ್ರಮ ಗೊಳ್ಳಲಾಗುತ್ತಿದೆ
ಎಂದು ತಿಳಿಸಿದರು.

ಶೀಘ್ರ ಟ್ರಾನ್ಸ್‌ಫಾರ್ಮರ್‌ ದುರಸ್ತಿ: ಬೇಸಿಗೆ ವೇಳೆ ವಿದ್ಯುತ್‌ ಬೇಡಿಕೆ ಹೆಚ್ಚಾಗಿ ಒತ್ತಡದಿಂದ ಟ್ರಾನ್ಸ್‌ಫಾರ್ಮರ್‌ಗಳು  ಸುಟ್ಟುಹೋಗುತ್ತಿದ್ದು, ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಸಂಬಂಧಿಸಿದ ಟ್ರಾನ್ಸ್‌ಫಾರ್ಮರ್‌ಗಳನ್ನು ಮೂರು ದಿನಗಳಲ್ಲಿ ಮತ್ತು ಕುಡಿಯುವ ನೀರಿಗೆ ಸಂಬಂಧಿಸಿದ ಟ್ರಾನ್ಸ್‌ಫಾರ್ಮರ್‌ಗಳನ್ನು 24 ಗಂಟೆಗಳಲ್ಲಿ ದುರಸ್ತಿಗೊಳಿಸಬೇಕು ಇಲ್ಲವೇ ಬದಲಾವಣೆ ಮಾಡಬೇಕು ಎಂದು ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಜೆಡಿಎಸ್‌ ಸದಸ್ಯ ಸಾ.ರ.ಮಹೇಶ್‌ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿದ್ಯುತ್‌ ಕ್ಷಾಮ ಎದುರಿಸಲು ಸಿದ್ದ 

ರಾಯಚೂರು: ಬೇಸಿಗೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯಲ್ಲೂ ವಿದ್ಯುತ್‌ ಕೊರತೆಯಾಗದಂತೆ ಮುಂಜಾಗೃತೆ ವಹಿಸಲಾಗಿದೆ ಎಂದು ಕೆಪಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ ನಾಯಕ್‌ ತಿಳಿಸಿದರು. ಶಕ್ತಿನಗರದ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ.9ರಂದು ರಾಜ್ಯದಲ್ಲಿ ಮೊದಲ ಬಾರಿಗೆ 214.6 ಮಿಲಿಯನ್‌ ಯೂನಿಟ್‌ ವಿದ್ಯುತ್‌ ಬಳಕೆಯಾಗಿದೆ. ಎರಡು ವರ್ಷಗಳ ಹಿಂದೆ 210 ಮಿಲಿಯನ್‌ ಯೂನಿಟ್‌ ಬಳಕೆಯಾಗಿತ್ತು. ಇಷ್ಟನ್ನೂ ಪೂರೈಸಿದ್ದೇವೆ. ಬೇಸಿಗೆಯಲ್ಲಿ ಎಷ್ಟೇ ಬೇಡಿಕೆ ಬಂದರೂ ನೀಡಬಲ್ಲ ಸಾಮರ್ಥ್ಯವಿದೆ. ಕೆಪಿಸಿಎಲ್‌ನ ಎಲ್ಲ ಘಟಕಗಳು ಸಕ್ರಿಯವಾಗಿವೆ. ನಮ್ಮ ಬಳಿ 1200 ಮೆಗಾವ್ಯಾಟ್‌ ವಿದ್ಯುತ್‌ ಸಂಗ್ರಹವಿದೆ. ಜೊತೆಗೆ ಕೇಂದ್ರೀಯ ಘಟಕಗಳಿಂದ ಅಗತ್ಯವಿರುವ ವಿದ್ಯುತ್‌ ಪಡೆಯುತ್ತಿದ್ದೇವೆ. ಇದರ ಜತೆಗೆ ತಾತ್ಕಾಲಿಕ ಇಂಧನ ಬೇಡಿಕೆಗೂ ಪ್ರಸ್ತಾವನೆ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. 

ಕಲ್ಲಿದ್ದಲು ಪೂರೈಸುವ ಕಂಪನಿಗಳಿಗೆ 1500 ಕೋಟಿ ರೂ. ಬಾಕಿ ಪಾವತಿಸಬೇಕಿದ್ದು, ಬೇಸಿಗೆಯಲ್ಲಿ ಕಲ್ಲಿದ್ದಲು ಪೂರೈಸಬೇಕಾದರೆ 
ನಾವು ಬಾಕಿ ಪಾವತಿಸಬೇಕಿದೆ. ಹೀಗಾಗಿ ಸ್ಥಳೀಯ ಸಂಸ್ಥೆಗಳಿಂದ ಬಾಕಿ ಇರುವ 3,750 ಕೋಟಿ ರೂ. ಬಿಲ್‌ ಪಾವತಿಗೆ ಕ್ರಮ ತೆಗೆದುಕೊಳ್ಳಲು ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು. ತಂತ್ರಜ್ಞಾನ ಆಧಾರದಡಿ ಆದ್ಯತೆ ಮೇಲೆ ಆರ್‌ಟಿಪಿಎಸ್‌ ಘಟಕಗಳ
ಉನ್ನತೀಕರಣ ಕಾರ್ಯ ಕೈಗೊಳ್ಳಲಾಗುವುದು. ಆರ್‌ಟಿಪಿಎಸ್‌ನ ಎಲ್ಲ ಘಟಕಗಳು ಸೇವೆಗೆ ಸಮರ್ಪಕವಾಗಿವೆ. ವಿದ್ಯುತ್‌ ಉತ್ಪಾದನೆಯಲ್ಲಿ ಯಾವುದೇ ಘಟಕ ಹಿಂದುಳಿದಿಲ್ಲ. ಬಿಟಿಪಿಎಸ್‌ ಸಾಮರ್ಥ್ಯ ಮೊದಲಿಗಿಂತ ಹೆಚ್ಚಾಗಿದ್ದು, ಹೆಚ್ಚು ನೀರಿನ ಬೇಡಿಕೆ ಸರಿದೂಗಿಸಲು ಕೃಷ್ಣಾ, ತುಂಗಭದ್ರಾದಿಂದ ನೀರು ಪಡೆಯಲು ಯೋಜನೆ ರೂಪಿಸಲಾಗಿದೆ. ವೈಟಿಪಿಎಸ್‌ ಭೂಸಂತ್ರಸ್ತರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ಕೆಲ ಸಮಸ್ಯೆಗಳಿದ್ದು, ಅದನ್ನು ಸರಿಪಡಿಸಲಾಗುವುದು ಎಂದು ಕುಮಾರನಾಯಕ್‌ ತಿಳಿಸಿದರು.

ಟಾಪ್ ನ್ಯೂಸ್

1-adasda

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ : ಮೂರೂವರೆ ಗಂಟೆಗಳ ಹುಡುಕಾಟ

thumb 6

ಎಲ್ಲಾದರು ಇರು…ಕೆನಡಾ ಸಂಸತ್ ನಲ್ಲಿ ಕನ್ನಡ ಕಲರವ; ವಿಡಿಯೋ ವೈರಲ್

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

heavy rain; holiday for schools in dharwad

ಮುಂದುವರಿದ ಮಳೆ: ಧಾರವಾಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ

ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasda

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ : ಮೂರೂವರೆ ಗಂಟೆಗಳ ಹುಡುಕಾಟ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

thumb 1

ಎಸೆಸೆಲ್ಸಿ ಪರೀಕ್ಷೆ ಫ‌ಲಿತಾಂಶ: ರಾಜ್ಯದ ಶೇ. 16 ವಿದ್ಯಾರ್ಥಿಗಳಿ ಗೆ “ಎ ಪ್ಲಸ್‌’ ಗ್ರೇಡ್‌

ಪಿಎಸ್‌ಐ ಅಕ್ರಮ ನೇಮಕ: ಸರಕಾರಕ್ಕೆ ನೋಟಿಸ್‌

ಪಿಎಸ್‌ಐ ಅಕ್ರಮ ನೇಮಕ: ಸರಕಾರಕ್ಕೆ ನೋಟಿಸ್‌

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

1-adasda

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ : ಮೂರೂವರೆ ಗಂಟೆಗಳ ಹುಡುಕಾಟ

tobacco

ತಂಬಾಕು ವ್ಯಸನ ನಿಯಂತ್ರ ಣಕ್ಕೆ ಮಾನಿಟರಿಂಗ್‌ ಸ್ಕ್ವ್ಯಾಡ್‌

thumb 6

ಎಲ್ಲಾದರು ಇರು…ಕೆನಡಾ ಸಂಸತ್ ನಲ್ಲಿ ಕನ್ನಡ ಕಲರವ; ವಿಡಿಯೋ ವೈರಲ್

6

ಕೆಎಂಎಫ್: ದಾಖಲೆ ಪ್ರಮಾಣದ ಹಾಲು ಉತ್ಪಾದನೆ

udupi1

ಧಾರಾಕಾರ ಮಳೆ: ತಗ್ಗು ಪ್ರದೇಶಗಳಲ್ಲಿ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.