2ನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆ
Team Udayavani, Jul 30, 2019, 3:00 AM IST
ಬೆಂಗಳೂರು: ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ ಮೊದಲಾದ ಕೋರ್ಸ್ಗಳಿಗೆ ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಎರಡನೇ ಮುಂದುವರಿದ ಸುತ್ತಿನ ಸೀಟ್ ಮ್ಯಾಟ್ರಿಕ್ಸ್ ಅನ್ನು ಜು. 31ರಂದು ಬಿಡುಗಡೆ ಮಾಡಲಾಗುತ್ತದೆ. ಅರ್ಹರು ಆ. 2ರ ಸಂಜೆ 6 ಗಂಟೆವರೆಗೂ ಅಪ್ಷನ್ ಎಂಟ್ರಿಗೆ ಅವಕಾಶ ಇದೆ.
ಮೊದಲು ಅಥವಾ ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳನ್ನು ವಾಪಾಸ್ ಪ್ರಾಧಿಕಾರಕ್ಕೆ ನೀಡಲು ಆ.2 ಕೊನೆಯ ದಿನವಾಗಿರುತ್ತದೆ. ಆ.4ಕ್ಕೆ ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಮಾಡಲಾಗುತ್ತದೆ. ಸೀಟು ಪಡೆದ ವಿದ್ಯಾರ್ಥಿಗಳು ಪ್ರವೇಶ ಪತ್ರಡೌನ್ಲೋಡ್ ಮಾಡಿಕೊಂಡು ಆ.7ರೊಳಗೆ ಶುಲ್ಕ ಪಾವತಿಸಬೇಕು. ಆ.8ರೊಳಗೆ ಕಾಲೇಜಿಗೆ ದಾಖಲಾಗಬೇಕು ಎಂದು ಪ್ರಾಧಿಕಾರ ತಿಳಿಸಿದೆ.
ಎಂಜಿನಿಯರಿಂಗ್, ಟೆಕ್ನಿಕಲ್ ಸೇರಿ ಇತ್ಯಾದಿ ಕೋರ್ಸ್ಗಳಿಗೆ ಲಭ್ಯವಿರುವ ಸೀಟುಗಳನ್ನು ಎರಡನೇ ಮುಂದುವರಿದ ಸುತ್ತಿನಲ್ಲಿ ಹಂಚಿಕೆ ಮಾಡಲಾಗುತ್ತದೆ. ಮೊದಲ ಸುತ್ತಿನಲ್ಲೇ ಹಂಚಿಕೆಯಾದ ಸೀಟುಗಳೇ ಎರಡನೇ ಮುಂದುವರಿದ ಸುತ್ತಿನಲ್ಲಿ ಹಂಚಿಕೆಯಾಗಿದ್ದರೆ ಅಭ್ಯರ್ಥಿಗಳು ಕಡ್ಡಾಯವಾಗಿ ಕಾಲೇಜಿನ ಪ್ರವೇಶ ಪಡೆಯಬೇಕು. ಯಾವುದೇ ಇತರೆ ಆಯ್ಕೆ ಇರುವುದಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ