3 ದಿನಗಳ ಪ್ರವಾಸಿ ಭಾರತೀಯ ದಿವಸಕ್ಕೆ ತೆರೆ


Team Udayavani, Jan 10, 2017, 3:50 AM IST

pravasi.jpg

– ರಾಷ್ಟ್ರಪತಿಗಳಿಂದ ಸಮಾರೋಪ ಭಾಷಣ
– 30 ಅನಿವಾಸಿ ಭಾರತೀಯ ಸಾಧಕರಿಗೆ ಸನ್ಮಾನ

ಬೆಂಗಳೂರು: ರಾಜಧಾನಿಯಲ್ಲಿ ನಡೆದ ಮೂರು ದಿನಗಳ ಪ್ರವಾಸಿ ಭಾರತೀಯ ದಿವಸ ಸಮಾವೇಶಕ್ಕೆ ಸೋಮವಾರ ತೆರೆ ಬಿದ್ದಿದ್ದು, ಜಗತ್ತಿನ ವಿವಿಧೆಡೆ ನೆಲೆಸಿರುವ ಅನಿವಾಸಿ ಭಾರತಿಯರ ಸಮಾಗಮಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಯಿತು.

ನಗರದ ಹೊರವಲಯದ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಶನಿವಾರ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ವಿಜಯ್‌ ಗೋಯೆಲ್‌ ಹಾಗೂ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಕೆ.ಸಿಂಗ್‌ ಅವರಿಂದ ಚಾಲನೆ ಪಡೆದುಕೊಂಡ ಪ್ರವಾಸಿ ಭಾರತೀಯ ದಿವಸ ಸಮಾವೇಶ, ಸೋಮವಾರ ಸಂಜೆ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಸಮಾರೋಪ ಭಾಷಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 30 ಅನಿವಾಸಿ ಭಾರತೀಯರ ಸನ್ಮಾನದೊಂದಿಗೆ ಮುಕ್ತಾಯ ಕಂಡಿತು.

ಎರಡನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸಹಿತ ಸಮಾವೇಶದ ಮೂರೂ ದಿನ ನಡೆದ ವಿವಿಧ ಗೋಷ್ಠಿ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಲ್ಲರೂ, ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿ, ಭಾರತದ ಸಮಗ್ರ ಅಭಿವೃದ್ಧಿಯಲ್ಲಿ ನೀವೂ ಪಾಲುದಾರರಾಗಿ ಎಂದು ಕರೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯವರಂತೂ |ನಾನು ಪಾಸ್‌ಪೋರ್ಟ್‌ ಕಲರ್‌ ನೋಡಿ ಅನಿವಾಸಿ ಭಾರತೀಯರನ್ನು ಗುರುತಿಸುವುದಿಲ್ಲ, ಬದಲಿಗೆ ರಕ್ತ ಸಂಬಂಧಿಕರಂತೆ ನೋಡುತ್ತೇನೆ. ಜಗತ್ತಿನ ಯಾವುದೇ ಭಾಗದಲ್ಲಿ ನೀವಿದ್ದರೂ ನಿಮ್ಮ ನೋವು ನಲಿವುಗಳಿಗೆ ನನ್ನ ಸರ್ಕಾರ ದಿನದ 24 ಗಂಟೆ ಸಹಾಯವಾಣಿಯಂತೆ ಕೆಲಸ ಮಾಡಲಿದೆ ಎಂದು ಅನಿವಾಸಿ ಭಾರತೀಯ ಸಮುದಾಯದಲ್ಲಿ ವಿಶ್ವಾಸ ಮೂಡಿಸಿದರು.

ಸಮಾವೇಶದಲ್ಲಿ ಭಾಗವಹಿಸಿದ್ದ ಅನಿವಾಸಿ ಭಾರತೀಯ ಸಮುದಾಯವು ಸಹ ತಾವಿರುವ ಕಡೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗೋಷ್ಠಿಗಳಲ್ಲಿ ವಿವರಿಸಿ ಕೇಂದ್ರ ಸರ್ಕಾರದಿಂದ ಅಗಬೇಕಿರುವ ಕ್ರಮಗಳ ಬಗ್ಗೆ ಪ್ರಸ್ತಾಪಿಸಿತು. ಅರಬ್‌ ರಾಷ್ಟ್ರಗಳಲ್ಲಿ ಉದ್ಯೋಗ ಕಡಿತ, ಪಾಸ್‌ಪೋರ್ಟ್‌ ಮತ್ತು ವೀಸಾ ಸಮಸ್ಯೆ, ಪಿಐಒ ಕಾರ್ಡ್‌ನಿಂದ ಐಓಸಿ ಕಾರ್ಡ್‌ಗೆ ಪರಿವರ್ತನೆ, ಬಂಡವಾಳ ಹೂಡಿಕೆಗೆ ಇರುವ ಅಡೆ-ತಡೆ, ನಿಯಮಾವಳಿ ಅಡ್ಡಿ, ಭಾರತದಲ್ಲಿ ವಿದ್ಯಾಭ್ಯಾಸಕ್ಕೆ ಬರುವ ತಮ್ಮ ಮಕ್ಕಳು ಎದುರಿಸುವ ಸಮಸ್ಯೆ, ತಮ್ಮ ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿನ ಸೇವೆ ಮತ್ತು ಅಗತ್ಯತೆ ಬಗ್ಗೆ ವಿವರಿಸಿದರು.

ಒಟ್ಟಾರೆ ಮೂರು ದಿನಗಳಲ್ಲಿ 14ಕ್ಕೂ ಹೆಚ್ಚು ಗೋಷ್ಠಿಗಳು ನಡೆದವು. ಅನಾರೋಗ್ಯ ಕಾರಣ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಸಮಾವೇಶಕ್ಕೆ ಗೈರಾದರೂ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ.ಕೆ. ಸಿಂಗ್‌ ಮೂರು ದಿನಗಳ ಕಾಲ ಸಮಾವೇಶದ ಸ್ಥಳದಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಹಾಜರಿದ್ದು ಉಸ್ತುವಾರಿ ವಹಿಸಿದ್ದರು.

ಪ್ರವಾಸೋದ್ಯಮ ಮತ್ತು ಬಂಡವಾಳ ಹೂಡಿಕೆಯಲ್ಲಿ ತಮ್ಮ ತಮ್ಮ ರಾಜ್ಯಗಳಲ್ಲಿರುವ ಅವಕಾಶಗಳ ಬಗ್ಗೆ ಐವರು ಮುಖ್ಯಮಂತ್ರಿಗಳು ಸಂವಾದದಲ್ಲಿ ಭಾಗವಹಿಸಿ ಬಂಡವಾಳ ಹೂಡಿಕೆಗೆ ಇರುವ ವಿಪುಲ ಅವಕಾಶ ಮತ್ತು ಸರ್ಕಾರದ ವತಿಯಿಂದ ನೀಡಲಾಗುವ ರಿಯಾಯಿತಿ, ವಿನಾಯಿತಿಗಳ ವಿವರ ನೀಡಿ ಉದ್ಯಮಿಗಳಿಗೆ ಅಹ್ವಾನ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ದಿನ ಹಾಗೂ ಮೂರನೇ ದಿನದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಭಾಗವಹಿಸಿದ್ದರು. ಉಳಿದಂತೆ ಕೈಗಾರಿಕೆ ಸಚಿವ ಆರ್‌.ವಿ.ದೇಶಪಾಂಡೆ ಮೂರೂ ದಿನದ ಸಮಾವೇಶದ ಹೊಣೆಗಾರಿಕೆ ನಿಭಾಯಿಸಿದರು. ದೇಶಪಾಂಡೆ, ಪ್ರಿಯಾಂಕ ಖರ್ಗೆ, ಕೃಷ್ಣ ಬೈರೇಗೌಡ ಹೊರತುಪಡಿಸಿದರೆ ರಾಜ್ಯ ಸಚಿವ ಸಂಪುಟದ ಇತರೆ ಯಾವ ಸಚಿವರೂ ಸಮಾವೇಶದತ್ತ ಸುಳಿಯಲೇ ಇಲ್ಲ.

ಸಂತಸ:
ಸಮಾವೇಶ ಕುರಿತು ಅಂತಿಮ ದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ವಿ.ಕೆ.ಸಿಂಗ್‌, ಮೂರು ದಿನಗಳ ಸಮಾವೇಶ ಯಶಸ್ವಿಯಾಗಿದೆ. ಅನಿವಾಸಿ ಭಾರತೀಯ ಸಮುದಾಯದಲ್ಲಿ ಭರವಸೆ ಮೂಡಿಸುವಲ್ಲಿ ಯಶಸ್ವಿಯಾಗಿದೆ. ಸಮಾವೇಶದ ಅತಿಥ್ಯ ವಹಿಸಿದ ಕರ್ನಾಟಕ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ವಿಶ್ವದೆಲ್ಲೆಡೆ 3.17 ಕೋಟಿ ಭಾರತೀಯರು ನೆಲೆಸಿದ್ದು, ಆ ಪೈಕಿ 1.78 ಕೋಟಿ ಮಂದಿ ಅನಿವಾಸಿ ಭಾರತೀಯರಾಗಿದ್ದಾರೆ. ಈ ಬಾರಿಯ ಪ್ರವಾಸಿ ಭಾರತೀಯ ದಿವಸ ಸಮಾವೇಶಕ್ಕೆ 2 ಸಾವಿರ ಅನಿವಾಸಿ ಭಾರತೀಯರು ಸೇರಿ 7000 ಪ್ರತಿನಿಧಿಗಳು ಆಗಮಿಸಿದ್ದರು. 72 ರಾಷ್ಟ್ರಗಳು ಹಾಗೂ 24 ರಾಜ್ಯಗಳಿಂದ ಪ್ರತಿನಿಧಿಗಳು ಭಾಗಿಯಾಗಿದ್ದರು. ಇದೊಂದು ಯಶಸ್ವಿ ಸಮ್ಮೇಳನವಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.