ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
Team Udayavani, Jan 24, 2021, 11:28 PM IST
ಬೆಂಗಳೂರು: ಸ್ವಾವಲಂಬಿ ಭಾರತ ಯೋಜನೆಯಡಿ ದೇಶದ ಪ್ಲಾಸ್ಟಿಕ್ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ದೇಶದಲ್ಲಿ ಎರಡು ಪ್ಲಾಸ್ಟಿಕ್ ಪಾರ್ಕ್ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. ನೀಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದ ಕರಾವಳಿ ನಗರ ಮಂಗಳೂರು ಹಾಗೂ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಒಂದೊಂದು ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸುವ ಬಗ್ಗೆ ಇತ್ತೀಚೆಗೆ ನಡೆದ ರಾಸಾಯನಿಕ ಇಲಾಖೆಯ ಯೋಜನೆ ಚಾಲನಾ ಸಮಿತಿ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
4 ರಸಗೊಬ್ಬರ ಕಾರ್ಖಾನೆ ಪುನಶ್ಚೇತನಕ್ಕೆ 50 ಸಾ. ಕೋ. ರೂ. :
ವಿವಿಧ ಕಾರಣಗಳಿಗಾಗಿ ಸ್ಥಗಿತಗೊಂಡಿದ್ದ ನಾಲ್ಕು ರಸಗೊಬ್ಬರ ಕಾರ್ಖಾನೆಗಳನ್ನು ಪುನಶ್ಚೇತನ ಗೊಳಿಸಲಾಗುತ್ತಿದ್ದು, ಇದಕ್ಕಾಗಿ 50 ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚು ಮೊತ್ತವನ್ನು ವ್ಯಯಿಸಲಾಗುತ್ತಿದೆ. ಈ ಪೈಕಿ ರಾಮಗುಂಡಮ್ ಸ್ಥಾವರದ ಕೆಲಸ ಬಹುತೇಕ ಮುಗಿದಿದ್ದು, ಯೂರಿಯಾ ಉತ್ಪಾದನೆಗೆ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’