ಕೃಷ್ಣಾ ನದಿಗೆ 5.76 ಲಕ್ಷ ಕ್ಯೂಸೆಕ್‌ ಹರಿವು!

Team Udayavani, Aug 8, 2019, 3:05 AM IST

krishna-nadi

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾದಿಂದ 1.09 ಲಕ್ಷ ಹಾಗೂ ರಾಜಾಪುರ ಬ್ಯಾರೇಜ್‌ದಿಂದ ಹರಿದು ಬರುವ 2.95 ಲಕ್ಷ ಕ್ಯೂಸೆಕ್‌ ಸೇರಿ ವಿವಿಧ ಜಲಾಶಯ ಹಾಗೂ ನದಿಗಳಿಂದ ಕೃಷ್ಣಾ ನದಿಗೆ 5.76 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಬೆಳಗಾವಿ ತಾಲೂಕಿನ ಚಂದನಹೊಸೂರ ಗ್ರಾಮದಲ್ಲಿ ಮನೆ ಕುಸಿದು ಯಲ್ಲೇಶ ಬಣ್ಣವರ ಮೃತಪಟ್ಟಿದ್ದು, ಗೋಕಾಕ ತಾಲೂಕು ಲೋಳಸೂರ ಗ್ರಾಮದಲ್ಲಿ ಮಳೆಯಲ್ಲಿ ನೆನೆದಿದ್ದ ಪದ್ಮಾವತಿ ಪಾಟೀಲ (21) ತೀವ್ರ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾಳೆ. ಅಥಣಿ ತಾಲೂಕಿನ ತೀರ್ಥ ಗ್ರಾಮದ ಬಸವರಾಜ ಮಾನಿಕ ಕಾಂಬಳೆ(14) ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.

ಬೆಳಗಾವಿ ಹಾಗೂ ಇತರ ತಾಲೂಕುಗಳಿಗೆ ಹೊರ ಜಿಲ್ಲೆಗಳಿಗೆ ಸಂಪರ್ಕ ಕಡಿತಗೊಂಡು ತರಕಾರಿ, ಹಾಲು ಹಾಗೂ ದಿನನಿತ್ಯದ ವಸ್ತುಗಳು ಸಿಗದಂತಾಗಿದೆ. ಪೆಟ್ರೋಲ್‌ ಬಂಕ್‌ಗಳಲ್ಲಿ ಇಂಧನ ದೊರಕದೇ ಪರದಾಟ ಹೆಚ್ಚಿದೆ. 106 ಗ್ರಾಮಗಳು ಪ್ರವಾಹ ಬಾಧಿತವಾಗಿ 22,682 ಜನ ಹಾಗೂ 9519 ಜಾನುವಾರುಗಳನ್ನು ರಕ್ಷಿಸಲಾಗಿದೆ. 79 ಪರಿಹಾರ ಕೇಂದ್ರಗಳಲ್ಲಿ 6970 ಜನರು ಆಶ್ರಯ ಪಡೆದಿದ್ದಾರೆ.

ಹಿಡಕಲ್‌ ಜಲಾಶಯದಿಂದ 90 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ ಮಾಡಿದ್ದರಿಂದ ಗೋಕಾಕ ನಗರದ ಅರ್ಧ ಭಾಗ ಜಲಾವೃತವಾಗಿದೆ. ಘಟಪ್ರಭಾ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮನೆಗೂ ನೀರು ನುಗ್ಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲ ತಾಲೂಕಿನ ಶಾಲಾ ಕಾಲೇಜುಗಳಿಗೆ ಆ.8ರಿಂದ ಮೂರು ದಿನ ರಜೆ ಘೋಷಿಸಲಾಗಿದೆ.

ಕೃಷ್ಣಾ, ವೇದಗಂಗಾ ನದಿಗಳ ಪ್ರವಾಹದಿಂದ ಚಿಕ್ಕೋಡಿ, ಅಥಣಿ, ರಾಯಬಾಗ ಹಾಗೂ ಕಾಗವಾಡ ತಾಲೂಕುಗಳ ಸುಮಾರು 40 ಹಳ್ಳಿಗಳು ಜಲಾವೃತವಾಗಿವೆ. ಗೋಕಾಕ ಹಾಗೂ ಚಿಕ್ಕೋಡಿಗಳ ಖಾಸಗಿ ಆಸ್ಪತ್ರೆಗೆ ನೀರು ನುಗ್ಗಿ ಒಳಗೆ ಸಿಲುಕಿದ್ದ ವೈದ್ಯರು ಹಾಗೂ 25ಕ್ಕೂ ಹೆಚ್ಚು ರೋಗಿಗಳನ್ನು ಪ್ರಕೃತಿ ವಿಕೋಪ ರಕ್ಷಣಾ ಪಡೆ ರಕ್ಷಿಸಿದೆ.

ಬೆಳಗಾವಿ ಕಬಲಾಪುರ ಬಳಿಯ ಬಳ್ಳಾರಿ ನಾಲಾ ಬಳಿ ಇರುವ ಮನೆಯೊಂದರಲ್ಲಿ ಸಿಕ್ಕಿಕೊಂಡ ದಂಪತಿ ರಕ್ಷಣೆಗೆ ಒಂದೂವರೆ ದಿನದಿಂದ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪ್ರಯತ್ನ ಫಲಿಸಿಲ್ಲ. ಖಾನಾಪುರದ ಬೀಡಿ ಗ್ರಾಮದಲ್ಲಿ ಎಮ್ಮೆ ಸಾವಿಗೀಡಾಗಿ ತಾಲೂಕಿನಲ್ಲಿ 75 ಮನೆ ಕುಸಿತವಾಗಿವೆ. ಜಾಂಬೋಟಿ ಬಳಿ ಕುಸಮಳಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ.

ಟಾಪ್ ನ್ಯೂಸ್

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.