ಬಿಜೆಪಿಯ 5 ಶಾಸಕರಿಂದ ರಾಜೀನಾಮೆ ಕೊಡಿಸುತ್ತೇವೆ;ಸಿಎಂ ಹೇಳಿದ್ದೇನು?
Team Udayavani, Sep 12, 2018, 11:55 AM IST
ಮಂಡ್ಯ: ನಮಗೂ ಯೂ-ಟರ್ನ್ ಹೊಡೆಯುವುದು ಗೊತ್ತು. ನಮ್ಮ ಸರ್ಕಾರವನ್ನು ಉಳಿಸಿಕೊಳ್ಳುವುದಕ್ಕೆ ಬಿಜೆಪಿಯ ಐವರು ಶಾಸಕರಿಂದ ರಾಜೀನಾಮೆ ಕೊಡಿಸಿದರೆ ಪರಿಸ್ಥಿತಿ ಏನಾಗ ಬಹುದೆಂಬ ಬಗ್ಗೆ ಅವರೂ ಲೆಕ್ಕಾಚಾರ ಹಾಕಲಿ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರ ರೊಂದಿಗೆ ಅವರು ಮಾತನಾಡಿದರು. ಬಿಜೆಪಿಯವರು ನಮ್ಮ ಮಿತ್ರ ಪಕ್ಷದ ಶಾಸಕರಿಂದ ರಾಜೀನಾಮೆ ಕೊಡಿಸಿ ಸರ್ಕಾರ ಉರುಳಿಸಲು ಯತ್ನಿಸಿದರೆ, ನಾವೂ ಬೇರೆ ರೀತಿ ಯೂ-ಟರ್ನ್ ತೆಗೆದುಕೊಳ್ಳಬೇಕಾಗುತ್ತದೆ.ಅಂದರೆ, ಬಿಜೆಪಿಯ ಐವರು ಶಾಸಕರಿಂದ ನಾವು ರಾಜೀನಾಮೆ ಕೊಡಿಸಬಹುದಲ್ಲವೇ ಎಂದು ಪರೋಕ್ಷವಾಗಿ ತಿರುಗೇಟು ನೀಡಿದರು. ರಾಜೀನಾಮೆ ನೀಡುವ ಶಾಸಕರು ಯಾರು? ಯಾವಾಗ ಕೊಡಿಸು ತ್ತಾರೆ? ಎಂಬ ಬಗ್ಗೆ ವಿವರಗಳನ್ನು ಹಂಚಿಕೊಳ್ಳಲು ಅವರು ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂದಾರ್ತಿ ಸಮೀಪ ಕಾರಿನಲ್ಲಿ ಭಸ್ಮವಾಗಿದ್ದು ಬೆಂಗಳೂರಿನ ನವ ಜೋಡಿ!
ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ
ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ
ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ