ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಐವರು ದುರ್ಮರಣ ನಾಲ್ವರು ಗಂಭೀರ
Team Udayavani, Aug 9, 2017, 10:26 PM IST
ಅಂಕೋಲಾ : ನಿಂತಿದ್ದ ಲಾರಿಗೆ ಸ್ವಿಫ್ಟ್ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲದ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ, ಮೃತರನ್ನು ಬಿಜಾಪುರ ಜಿಲ್ಲೆಯ ಜುಮ್ಮನಾಳದವರೆಂದು ತಿಳಿದುಬಂದಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.