ಪೊಲೀಸರಿಗೆ 5 ಪ್ರತ್ಯೇಕ ಕೋವಿಡ್ ಆಸ್ಪತ್ರೆ ಮೀಸಲು
Team Udayavani, Jun 24, 2020, 7:48 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಿಸುವಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಬೆಂಗಳೂರಿನಲ್ಲಿ ಐದು ಕೋವಿಡ್ 19 ಆಸ್ಪತ್ರೆಗಳನ್ನು ಮೀಸಲಿಡಲು ಸರ್ಕಾರ ನಿರ್ಧರಿಸಿದೆ.
ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳವಾರ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗೆ ಕೋವಿಡ್ 19 ಸೋಂಕು ಹೆಚ್ಚಾಗುತ್ತಿವೆ.
ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಆತಂಕಗೊಂಡಿದ್ದು, ಅವರಿಗೆ ಆತ್ಮಸ್ಥೈರ್ಯ ತುಂಬಲು ಪೊಲೀಸರಿಗಾಗಿಯೇ ಪ್ರತ್ಯೇಕ ಕೋವಿಡ್ 19 ಪರೀಕ್ಷಾಲಯ, ಗಂಟಲು ದ್ರವ ಸಂಗ್ರಹಿಸುವ ಸಂಚಾರ ವಾಹನ ಕಾಯ್ದಿರಿಸುವಂತೆ ನಿರ್ದೇಶನ ನೀಡಿದ್ದಾರೆ. ಆಸ್ಪತ್ರೆಗಳಲ್ಲಿ ದಾಖಲಾಗಿರುವ ಪೊಲೀಸ್ ಸಿಬ್ಬಂದಿಗೆ ಉತ್ತಮ ಊಟ, ಮೂಲ ಸೌಕರ್ಯ ಒದಗಿಸುವುದು. ಪೊಲೀಸ್ ಸಿಬ್ಬಂದಿಗಾಗಿ ಪ್ರತ್ಯೇಕ ಕ್ವಾರಂಟೈನ್ ಕೇಂದ್ರ, ಪೊಲೀಸರಿಗಾಗಿಯೇ ಪ್ರತ್ಯೇಕ ಆ್ಯಂಬುಲೆನ್ಸ್ ಕಲ್ಪಿಸುವಂತೆ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…