ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್
Team Udayavani, Oct 22, 2021, 10:45 PM IST
ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಯ ಶಿಕ್ಷಕರ ಕೊರತೆ ಹೊಗಲಾಡಿಸಲು ಶೀಘ್ರವೇ ಐದು ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ನಗರದ ಸಾರಕ್ಕಿಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದಾನಿ ವಿ.ಎಸ್.ರೆಡ್ಡಿ ಅವರು ನಿರ್ಮಾಣ ಮಾಡಿರುವ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿರುವ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಸರ್ಕಾರಿ ಶಾಲೆಯಲ್ಲಿ 15ರಿಂದ 20 ಸಾವಿರ ಶಿಕ್ಷಕರ ಕೊರತೆಯಿದ್ದು, ಈ ಹಿಂದೆಯೇ 10 ಸಾವಿರ ಶಿಕ್ಷಕರ ನೇಮಕಕ್ಕೆ ಮುಂದಾಗಿದ್ದರೂ, ಭರ್ತಿಯಾಗಿದ್ದು 3 ಸಾವಿರ ಶಿಕ್ಷಕರು. ಗುಣಮಟ್ಟದ ಕಲಿಕೆಗೆ ಅನುಕೂಲವಾಗುವಂತೆ ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಿದ್ದೇವೆ ಎಂದರು.
ಹಳೇ ವಿದ್ಯಾರ್ಥಿಗಳು, ಖಾಸಗಿ ವ್ಯಕ್ತಿಗಳು, ಕಾರ್ಪೊರೇಟ್ ಕಂಪನಿಗಳು, ಸರ್ಕಾರೇತರ ಸಂಸ್ಥೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗುತ್ತಿವೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದಾಗಬೇಕು ಮತ್ತು ಎಲ್ಲರ ಸಹಕಾರ ಅಗತ್ಯ. ವಿ.ಎಸ್.ರೆಡ್ಡಿ ಅವರು ಈ ಶಾಲೆಗೆ ಕೋಟ್ಯಾಂತರ ಹಣ ವೆಚ್ಚ ಮಾಡಿ ನೂತನ ಕಟ್ಟಡಗಳನ್ನು ನಿರ್ಮಿಸಿರುವುದು ಬಡ ಮಕ್ಕಳ ವ್ಯಾಸಂಗಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕೊರತೆ ಇಲ್ಲ. ಸಮರ್ಥ ಶಿಕ್ಷಕರಿ¨ªಾರೆ. 2020ರ ಯುಪಿಎಸ್‌ಇ ಪಾಸಾಗಿರುವವರಲ್ಲಿ ಹಲವು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಓದಿದ್ದಾರೆ. ಅದರಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರೂ ಇದ್ದಾರೆ. ಈ ಮೂಲಕ ಕನ್ನಡ ಶಾಲೆಗಳು ಯಾವುದೇ ಪ್ರತಿಷ್ಠಿತ ಖಾಸಗಿ ಶಾಲೆಗೂ ಕಡಿಮೆಯಿಲ್ಲ. ರಾಜ್ಯದಲ್ಲಿ 10 ಮಕ್ಕಳಿಗಿಂತ ಕಡಿಮೆ ಇರುವ 3,800ಕ್ಕೂ ಹೆಚ್ಚು ಶಾಲೆಗಳಿವೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಕಡಿಮೆ ಮಕ್ಕಳಿದ್ದರೂ ಶಾಲೆಗಳನ್ನು ಮುಂದುವರೆಸಲಾಗುತ್ತಿದೆ ಎಂದರು.
ಇದನ್ನೂ ಓದಿ:ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ
ಬ್ರಿಟಿಷ್ ಬಯೋಲಾಜಿಕಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ವಿ.ಎಸ್.ರೆಡ್ಡಿ ಮಾತನಾಡಿ, ನಾನು ಈ ಶಾಲೆಯಲ್ಲಿ ವ್ಯಾಸಂಗ ಮಾಡಿ ಈ ಹಂತಕ್ಕೆ ಏರಿದ್ದೇನೆ. ಸರ್ಕಾರಿ ಶಾಲೆಯಲ್ಲಿ ಓದಿದವರೇ ಹೆಚ್ಚು ಉನ್ನತ ಸ್ಥಾನದಲ್ಲಿದ್ದಾರೆ. ಖಾಸಗಿ ಶಾಲೆಗಳಲ್ಲಿ ಓದಿದವರು ಖಾಸಗಿ ಕಂಪನಿಗಳಲ್ಲಿ ಮ್ಯಾನೇಜರ್ ಆಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ. ಸರ್ಕಾರ ಶಾಲೆಗಳನ್ನು ಕೀಳಾಗಿ ನೋಡುವ ದೃಷ್ಟಿ ಬದಲಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಯಲ್ಲಿ 2.25 ಕೋಟಿ ರೂ.ವೆಚ್ಚದಲ್ಲಿ ಅಬ್ಬಯ್ಯ ಸ್ಮಾರಕಭವನ ನಿರ್ಮಾಣ ಮಾಡಿದ್ದು, 12 ಕೊಠಡಿಗಳು, ಕಂಪ್ಯೂಟರ್ ಲ್ಯಾಬ್, 4 ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಎಸ್.ಕೆ.ನಟರಾಜ್, ಶಾಸಕಿ ಸೌಮ್ಯ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಸಂಗಪ್ಪ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಜೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪ್ರಕಾಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ
ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ
ಉರಿಗೌಡ,ನಂಜೇಗೌಡ ಹೆಸರು ರಾಜಕೀಯ ವಿಚಾರ ಆಗಬಾರದು: ಆರ್.ಅಶೋಕ್
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ
ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಗೋಮೂತ್ರ ಹಾಕಿ ಸ್ಥಳ ಶುದ್ದೀಕರಣ
MUST WATCH
ಹೊಸ ಸೇರ್ಪಡೆ
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ
ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ
ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ