5, 8,9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಮುಂದೂಡಿ: ಶಾಲೆಗಳ ವಕೀಲರ ಮನವಿ
Team Udayavani, Mar 10, 2024, 12:03 AM IST
ಬೆಂಗಳೂರು: ಐದು, ಎಂಟು, ಒಂಬತ್ತನೇ ತರಗತಿಗಳಿಗೆ ಸೋಮವಾರದಿಂದ ಆರಂಭವಾಗಲಿರುವ ಮೌಲ್ಯಾಂಕನ ಪರೀಕ್ಷೆಯನ್ನು ಮುಂದೂಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ವಕೀಲರು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಮೌಲ್ಯಾಂಕನ ಪರೀಕ್ಷೆ ಸೋಮವಾರ(ಮಾ.11)ಕ್ಕೆ ನಿಗದಿಯಾಗಿದೆ. ಆದರೆ ಪರೀಕ್ಷೆಗೆ ಅವಕಾಶ ನೀಡಿ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ನಾವು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಮಂಗಳವಾರ (ಮಾ.12)ಕ್ಕೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ಅಡ್ವೊಕೇಟ್ ಆನ್ ರೆಕಾರ್ಡ್ ಎ. ವೇಲನ್ ಶಿಕ್ಷಣ ಇಲಾಖೆಗೆ ಇ- ಮೇಲ್ ಮಾಡಿದ್ದಾರೆ.
ಕಳೆದ ವರ್ಷ ಇಂಥದ್ದೇ ಪರಿಸ್ಥಿತಿ ನಿರ್ಮಾಣಗೊಂಡಿದ್ದ ಶಾಲಾ ಶಿಕ್ಷಣ ಇಲಾಖೆಯು ಮಾ. 13ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಮಾ. 27ಕ್ಕೆ ಮುಂದೂಡಿತ್ತು. ಈಗ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿರುವುದರಿಂದ ಪರೀಕ್ಷೆ ಮುಂದೂಡಬೇಕು ಎಂದು ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು