7.20 ಲಕ್ಷ ರೂ. ನಗದು ವಶ

ಅನೀತಿ ಕಥೆಗಳು

Team Udayavani, Nov 18, 2019, 3:00 AM IST

ಕೆ.ಆರ್‌.ಪೇಟೆ ತಾಲೂಕಿನ ಬಲ್ಲೇನಹಳ್ಳಿ ಬಳಿ ಇರುವ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 5 ಲಕ್ಷ ಮತ್ತು ಮಾರೇನಹಳ್ಳಿ ಚೆಕ್‌ ಪೋಸ್ಟ್‌ನಲ್ಲಿ 2.20ಲಕ್ಷ ರೂ.ಗಳನ್ನು ತಪಾಸಣಾ ಕೇಂದ್ರದ ಅಧಿಕಾರಿಗಳು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿದ್ದಾರೆ. ಈ ಮಧ್ಯೆ, ಕೆ.ಆರ್‌.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿಯವರೆಗೆ ತಾಲೂಕಿನ ವಿವಿಧ ಚೆಕ್‌ಪೋಸ್ಟ್‌ಗಳ ಮೂಲಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 24 ಸಾವಿರ ಲೀಟರ್‌ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ