ಒಂಟಿಯಾಗಿದ್ದ 8 ನೇ ತರಗತಿ ಬಾಲಕಿಯ ಗ್ಯಾಂಗ್ರೇಪ್; ಬರ್ಬರ ಹತ್ಯೆ
Team Udayavani, Nov 17, 2018, 1:32 PM IST
ನಂಜನೂಡು: ರಾಜ್ಯವೇ ಬೆಚ್ಚಿ ಬೀಳುವಂತಹ ರಾಕ್ಷಿಸಿ ಕೃತ್ಯ ನಂಜನಗೂಡಿನಲ್ಲಿ ನಡೆದಿದ್ದು, ಗುಡಿಸಲಿನಲ್ಲಿ ಏಕಾಂಗಿಯಾಗಿದ್ದ 8 ನೇ ತರಗತಿಯ ಬಾಲಕಿಯ ನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆಗೈದ ಭೀಭತ್ಸ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಬಾಲಕಿ ಮನೆಯಲ್ಲಿ ಒಬ್ಬಳೇ ಇರುವುದನ್ನು ಕಂಡು ನುಗ್ಗಿದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.
ಬಾಲಕಿಯ ಪೋಷಕರು ತಳ್ಳುವ ಗಾಡಿಯಲ್ಲಿ ಕೆಲಸಕ್ಕೆಂದು ಹೋಗಿದ್ದರು. ಮನಗೆ ಬಂದು ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕಿಯ ಶವ ನೋಡಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.