800 ಆಕ್ಸಿಜನ್ ಕಾನ್ಸಂಟ್ರೇಟರ್ ಹಂಚಿಕೆ
Team Udayavani, May 21, 2021, 6:14 AM IST
ಬೆಂಗಳೂರು: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆ ಗಳಿಗೆ 25 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗು ತ್ತಿದೆ. ಇತ್ತೀಚೆಗೆ 800 ಕಾನ್ಸಂಟ್ರೇಟರ್ ಬಂದಿದ್ದು, ಮಂಡ್ಯ, ಚಿತ್ರದುರ್ಗ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ ಮೊದಲಾದ ಮೂಲ ಸೌಕರ್ಯ ಕಡಿಮೆ ಇರುವ ಕಡೆಗಳಿಗೆ ನೀಡಲಾಗುತ್ತಿದೆ ಎಂದರು.
ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯು ವ್ಯವಸ್ಥೆ, ಆಕ್ಸಿಜನ್ ಪೂರೈಕೆ ಸೇರಿ ಹೆಚ್ಚು ನೆರವು ನೀಡಲು ಚರ್ಚಿಸಲಾಗುವುದು. ಇದಕ್ಕಾಗಿ ತುಮಕೂರು, ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಾಗುತ್ತಿದೆ. ಬಳಿಕ ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಗದಗ ಜಿಲ್ಲೆಗಳಿಗೆ ಭೇಟಿ ನೀಡಿ ಚರ್ಚಿಸಲಾಗುವುದು ಎಂದರು.
ಪ್ರತಿ ಜಿಲ್ಲಾಡಳಿತ, ಸಚಿವ ಸಂಪುಟದ ಸಹೋ ದ್ಯೋಗಿಗಳಿಗೆ ಮಾಹಿತಿ ನೀಡಲಾಗುವುದು. ಎಲ್ಲ ಜನ ಪ್ರತಿ ನಿಧಿಗಳು ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಕೋರಲಾಗು ವುದು. ಪಾಸಿಟಿವಿಟಿ ದರ ಶೇ. 37-40 ಇದ್ದುದು ಶೇ. 2 7ಕ್ಕೆ ಬಂದಿದೆ. ಇದನ್ನು ಶೇ. 5ಕ್ಕಿಂತ ಕಡಿಮೆ ಇಳಿಸುವ ಗುರಿ ಇದೆ. ಬೇರೆ ದೇಶಗಳ ಕೊರೊನಾ ಅಲೆ ಬಗ್ಗೆ ಕಾನ್ಪುರ ಐಐಟಿ ವರದಿ ನೀಡಿದ್ದು, ಈ ಬಗ್ಗೆ ಕೇಂದ್ರದ ಜತೆ ಚರ್ಚೆಯಾಗಿ ಸಲಹೆ ದೊರೆತಿದೆ. ಸಾವಿನ ಸಂಖ್ಯೆ ಹೆಚ್ಚು ಕಂಡುಬರುತ್ತಿದ್ದು, ಅದನ್ನೂ ಕಡಿಮೆ ಮಾಡಬೇಕಿದೆ ಎಂದರು.
ಪ್ರತಿ ಗ್ರಾಮ ಪಂಚಾಯತ್ಗೆ 50 ಸಾ. ರೂ. ಮುಂಗಡ ನೀಡಲು ಮುಖ್ಯಮಂತ್ರಿಗಳು ನಿರ್ಧ ರಿಸಿ ದ್ದಾರೆ. ಹಳ್ಳಿಗಳ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಗೆ ಇದು ಅನುಕೂಲವಾಗಲಿದೆ ಎಂದರು.
ಕೊರೊನಾದಿಂದ ಸಾವಿಗೀಡಾದವರ ಅಂಕಿ ಅಂಶ ಮುಚ್ಚಿಟ್ಟರೆ ಯಾವುದೇ ಲಾಭವಿಲ್ಲ. ಒಂದೂ ಕಾಲು ಲಕ್ಷಕ್ಕಿಂತ ಹೆಚ್ಚು ಕೋವಿಡ್ ಪರೀಕ್ಷೆ ನಡೆಯು ತ್ತಿದ್ದು, ಇನ್ನೂ ಹೆಚ್ಚಿಸಲು, 24 ಗಂಟೆಯೊಳಗೆ ಪರೀ ಕ್ಷಾ ವರದಿ ನೀಡಲು ಸೂಚಿಸಲಾಗಿದೆ ಎಂದರು.
ಬ್ಲ್ಯಾಕ್ ಫಂಗಸ್ ಪ್ರಕರಣ ನೋಡಿಕೊಂಡು ಔಷಧ ವಿತರಿಸಲಾಗುತ್ತಿದೆ. ಹೆಚ್ಚಿನ ಪ್ರಮಾ ಣ ದ ಔಷಧ ನೀಡಲು ಕೇಂದ್ರ ಸರಕಾ ರಕ್ಕೆ ಮನವಿ ಮಾಡಲಾಗಿದೆ. ಕೋವಿ ಡ್ ನಿಂದ ಗುಣಮುಖರಾದವರ ಆರೋಗ್ಯದ ಮೇಲೂ ನಿಗಾ ಇಡಲು ಸೂಚಿಸಲಾಗಿದೆ ಎಂದರು. ವರ್ಗಾವಣೆಗೆ ಸಂಸದ ಶ್ರೀನಿವಾಸ್ ಪ್ರಸಾದ್ ತಡೆಯೊಡ್ಡಿ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ