ಒಂದೇ ದಿನ ದಾಖಲೆಯ 99 ಹೊಸ ಕೋವಿಡ್-19 ಪ್ರಕರಣಗಳು
Team Udayavani, May 18, 2020, 5:36 PM IST
ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 99 ಜನರಿಗೆ ಸೋಂಕು ತಾಗಿದ್ದು ಇದು ಹೊಸ ದಾಖಲೆಯಾಗಿದೆ. ಅನ್ಯರಾಜ್ಯಗಳಿಂದ ಬರುತ್ತಿರುವ ಜನರಲ್ಲಿ ಹೆಚ್ಚಿನ ಪ್ರಮಾಣದ ಸೋಂಕು ಕಂಡುಬರುತ್ತಿದೆ.
ಇಂದು ಮಧ್ಯಾಹ್ನದ ಬುಲೆಟಿನ್ ನಲ್ಲಿ 84 ಜನರ ವರದಿಯಾಗಿದ್ದು, ಕಲಬುರಗಿಯಲ್ಲಿ ಐದು, ದಕ್ಷಿಣ ಕನ್ನಡದಲ್ಲಿ ಎರಡು ಮತ್ತು ಉಡುಪಿ- ಉತ್ತರ ಕನ್ನಡದಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.
ಬೆಂಗಳೂರಿನಲ್ಲಿ ಐದು ಪ್ರಕರಣಗಳು ಶಿವಾಜಿನಗರದಲ್ಲಿ ವರದಿಯಾಗಿದೆ. ಮತ್ತೊಂದು ಪ್ರಕರಣ ತಮಿಳುನಾಡಿನಿಂದ ವ್ಯಕ್ತಿಗೆ ಸೋಂಕು ತಾಗಿದೆ.
ಕಲಬುರಗಿಯಲ್ಲಿ ನಾಲ್ಕು ಮಕ್ಕಳಿಗೆ ಸೇರಿದಂತೆ ಐವರಿಗೆ ಸೋಂಕು ತಾಗಿದೆ. ಇಬ್ಬರು ಮುಂಬೈನಿಂದ ಬಂದವರು ಮತ್ತು ಮೂವರು ಪೂಣೆಯಿಂದ ಬಂದವರಾಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ ರಾಯಗಡದದಿಂದ ಬಂದ ವ್ಯಕ್ತಿಗೆ ಸೋಂಕು ತಾಗಿದ್ದು, ಮತ್ತೊಂದು ಮಹಿಳೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.
ಉಡುಪಿಯಲ್ಲಿ ಮುಂಬೈನಿಂದ ಬಂದ ಮಹಿಳೆಗೆ ಸೋಕು ತಾಗಿದ್ದು, ಉತ್ತರ ಕನ್ನಡದಲ್ಲೂ 30ರ ಯುವಕನಿಗೆ ಸೋಂಕು ದೃಢವಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 99 ಸೋಂಕು ಪ್ರಕರಣ ದೃಢವಾಗಿದೆ. ಇದಿರಂದ ಸೋಂಕಿತರ ಸಂಖ್ಯೆ ಒಟ್ಟು 1246ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?