“ಯೋಗ-ವಸುದೈವ ಕುಟುಂಬಕ್ಕಾಗಿ”ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯಪಾಲ ಗೆಹ್ಲೋಟ್
Team Udayavani, Jun 21, 2023, 11:53 AM IST
ಬೆಂಗಳೂರು: 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯುಷ್ಯ ಇಲಾಖೆ ಇಂದು ವಿಧಾನಸೌಧದ ಮುಂಬಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಯೋಗ-ವಸುದೈವ ಕುಟುಂಬಕ್ಕಾಗಿ” ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್, ಶಾಸಕರುಗಳಾದ ರಿಜ್ವಾನ್ ಅರ್ಷದ್, ಶರವಣನ್, ಕ್ರೀಡಾಪಟುಗಳಾದ ವೆಂಕಟೇಶ್ ಪ್ರಸಾದ್, ಅಂಜು ಬಿ ಜಾರ್ಜ್, ನಟಿ ಭಾವನ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.