ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ, ಲಕ್ಷ ರೂ. ದಂಡ
Team Udayavani, Jan 13, 2020, 3:00 AM IST
ಚಿತ್ರದುರ್ಗ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾ ಧಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸಿದ್ದೇಶ ಶಿಕ್ಷೆಗೊಳಗಾದ ಆರೋಪಿ. 2017, ಅ.7ರಂದು ಹಿರಿಯೂರು ತಾಲೂಕು ಹಾಲುಮಾದೇನಹಳ್ಳಿಯ ಹುಳುವಿನಾಳ್ ಅರಣ್ಯ ಪ್ರದೇಶದಲ್ಲಿ ಮಹಿಳೆಯನ್ನು ಬಲವಂತವಾಗಿ ಎಳೆದೊಯ್ದು ಹೀನಕೃತ್ಯ ಎಸಗಿದ್ದ ಈತ ಬಂಗಾರದ ಆಭರಣಗಳಿಗಾಗಿ ಈ ಕೊಲೆ ನಡೆದಿದೆ ಎಂಬಂತೆ ಬಿಂಬಿಸಲು ಕಿವಿಯಲ್ಲಿದ್ದ ಓಲೆ ಗಳನ್ನು ತೆಗೆದು ಬೇರೆಡೆ ಎಸೆದಿದ್ದ.
ಈ ಕುರಿತು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶ ಎಸ್.ವೈ.ವಟವಟಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಿದ್ದೇಶನಿಗೆ 10 ವರ್ಷ ಕಠಿಣ ಸಜೆ, 50 ಸಾವಿರ ರೂ. ದಂಡ ಹಾಗೂ ಕೊಲೆ ಪ್ರಕರಣಕ್ಕೆ ಜೀವಾವ ಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಹಣವನ್ನು ಸಂತ್ರಸ್ತೆ ಪರಿವಾರಕ್ಕೆ ನೀಡಲು ಕೋರ್ಟ್ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ