Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

ಪೆನ್‌ಡ್ರೈವ್‌ ಪ್ರಕರಣದ ಸೂತ್ರಧಾರ ಡಿಕೆಶಿ: ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪ

Team Udayavani, May 7, 2024, 7:00 AM IST

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಹಂಚಿಕೆಯ ಕಥಾನಾಯಕ, ರೂವಾರಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಂಬ ಗಂಭೀರ ಆರೋಪವನ್ನು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಮಾಡಿದ್ದಾರೆ.

ಹಾಗೆಯೇ ಇದಕ್ಕೆ ಸಂಬಂಧಿಸಿ ತಮಗೂ ಮಾಜಿ ಸಂಸದ ಎಲ್‌.ಆರ್‌. ಶಿವರಾಮೇಗೌಡ ಮತ್ತು ಡಿ.ಕೆ. ಶಿವಕುಮಾರ್‌ ಜತೆಗೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋವನ್ನು ದೇವರಾಜೇಗೌಡ ಬಿಡುಗಡೆ ಮಾಡಿದ್ದಾರೆ. ಜತೆಗೆ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ತಮ್ಮ ನಿವಾಸಕ್ಕೆ ಬಂದಿದ್ದ ವೀಡಿಯೋ ಬಿಡುಗಡೆ ಮಾಡಿ ಪೆನ್‌ಡ್ರೈವ್‌ ಹಂಚಿಕೆಗೂ ತಮಗೂ ಸಂಬಂಧವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಸೋಮವಾರ ಸಂಜೆ ತುರ್ತು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವರಾಮೇಗೌಡರ ಫೋನ್‌ನಿಂದ ಕರೆ ಮಾಡಿ ಡಿ.ಕೆ. ಶಿವಕುಮಾರ್‌ ನನ್ನ ಜತೆ ಮಾತ ನಾಡಿದ್ದರು. ತನ್ನ ಬೆಂಬಲಿಗರ ಮೂಲಕ ಲೋಕಸಭಾ ಚುನಾವಣೆ ಬಳಿಕ ನನಗೆ ಕ್ಯಾಬಿನೆಟ್‌ ದರ್ಜೆಯ ಹುದ್ದೆ ಕೊಡಿಸುವುದಾಗಿ ಆಮಿಷವೊಡ್ಡಿದ್ದರು. ನನ್ನಿಂದಲೇ ವೀಡಿಯೋ ಬಿಡುಗಡೆ ಮಾಡಿಸಲು ಸಂಚು ರೂಪಿಸಿದ್ದರು. ಆದರೆ ಇದಕ್ಕೆ ನಾನು ಒಪ್ಪದ ಹಿನ್ನೆಲೆಯಲ್ಲಿ ನನ್ನನ್ನು ಪ್ರಮುಖ ಆರೋಪಿ ಯನ್ನಾಗಿ ಮಾಡಲು ಷಡ್ಯಂತ್ರ ಹೂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಐಪಿಎಸ್‌ ಅಧಿಕಾರಿ ಒತ್ತಡ
ಪೆನ್‌ಡ್ರೈವ್‌ ಹೇಗೆ ಸಿದ್ಧ ಗೊಂಡಿತು, ಹೊಳೆನರಸೀಪುರಕ್ಕೆ ಹೇಗೆ ಹೋಯಿತು, ಶ್ರೇಯಸ್‌ ಪಟೇಲ್‌ಗೆ ಏನೆಲ್ಲ ನಿರ್ದೇಶನ ಇತ್ತು  ಎಲ್ಲವೂ ನನಗೆ ಗೊತ್ತು. ನಾನು ನನಗೆ ತಿಳಿದಿದ್ದ ಮಾಹಿತಿಯನ್ನು ವಿಶೇಷ ತನಿಖಾ ತಂಡಕ್ಕೆ ನೀಡಿದ್ದೆ. ಆದರೆ ತನಿಖಾ ತಂಡದಲ್ಲಿರುವ ಮಹಿಳಾ ಐಪಿಎಸ್‌ ಅಧಿಕಾರಿಯೊಬ್ಬರು, ಡಿ.ಕೆ. ಶಿವಕುಮಾರ್‌ ಅವರ ವಿರುದ್ಧವಾಗಿ ಎಸ್‌ಐಟಿಗೆ ನೀಡಿರುವ ಹೇಳಿಕೆಯನ್ನು ಹಿಂಪಡೆಯಿರಿ. ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಡಿ. ಶಿವಕುಮಾರ್‌ ವಿರುದ್ಧ ನೀಡಿದ್ದ ಹೇಳಿಕೆಯ ಪ್ಯಾರಾವನ್ನು ಡಿಲೀಟ್‌ ಮಾಡೋಣ ಎಂದು ತಾಕೀತು ಮಾಡಿದ್ದರು ಎಂದು ಮತ್ತೊಂದು ಗಂಭೀರ ಆರೋಪವನ್ನು ದೇವರಾಜೇ ಗೌಡ ಮಾಡಿದ್ದಾರೆ.

ಎಸ್‌ಐಟಿ ತನಿಖೆಗೆ ಅತೃಪ್ತಿ ಸಿಬಿಐಗೆ ಆಗ್ರಹ
ರಾಜ್ಯ ಸರಕಾರ, ಸಿಎಂ, ಡಿಸಿಎಂ ನೇತೃತ್ವದಲ್ಲಿ ಪೊಲೀಸ್‌ ಅಧಿಕಾರಿಗಳ ಗೌಪ್ಯ ಸಭೆ ನಡೆಸಲಾ ಗುತ್ತಿದೆ. ಗೌಪ್ಯ ಸಭೆ ನಡೆಸಿ ಯಾರು ಯಾರನ್ನು ಆರೋಪಿಯನ್ನಾಗಿ ಮಾಡಬೇಕು ಎನ್ನುವ ಸೂಚನೆ ಕೊಟ್ಟಿದ್ದಾರೆ. ನಾನು ಆರಂಭದಲ್ಲಿ ಎಸ್‌ಐಟಿ ತನಿಖೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದೆ. ಆದರೆ 3 ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳಿಂದ ನನ್ನ ವಿಶ್ವಾಸಕ್ಕೆ ಧಕ್ಕೆ ಉಂಟಾಗಿದೆ. ರಿಮೋಟ್‌ ಕಂಟ್ರೋಲ್ಡ್‌ ತನಿಖೆ ನಡೆಯತ್ತಿದೆ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಅಥವಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಎಸ್‌ಐಟಿ ಅಧಿಕಾರಿಗಳಿಗೆ ಎಲ್ಲವನ್ನೂ ಕೊಟ್ಟಿದ್ದೇನೆ. ತನಿಖಾಧಿಕಾರಿ ಎಸ್‌ಪಿ ಮುಂದೆ ಪ್ರಮುಖ ಅಂಶಗಳನ್ನು ಉಲ್ಲೇಖ ಮಾಡಿದ್ದೇನೆ. ಕಾರ್ತಿಕ್‌ ನನ್ನ ಮನೆಗೆ ಯಾವಾಗ ಬಂದಿದ್ದು ಎಂಬ ವೀಡಿಯೋ ನನ್ನ ಬಳಿ ಇದೆ. ಪೆನ್‌ ಡ್ರೈವ್‌ ಹೊಳೆನರಸೀಪುರದಿಂದ ಪರಾಜಿತ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಅವರನ್ನು ತಲುಪಿತ್ತು. ಆತನ ಗುರು ಪುಟ್ಟಿ ಅಲಿಯಾಸ್‌ ಪುಟ್ಟರಾಜು ಅವರು ಅದನ್ನು ಬೆಂಗಳೂರಿಗೆ ತಂದರು. ಅವರು ಯಾರನ್ನು ಭೇಟಿಯಾದರು ಎಂಬ ಬಗ್ಗೆ ದಾಖಲೆ ನನ್ನ ಬಳಿ ಇದೆ ಎಂದು ದೇವರಾಜೇಗೌಡ ಹೇಳಿದರು.

ಪೆನ್‌ ಡ್ರೈವ್‌ ಹಂಚಿಕೆ ಮಾಡಿರುವ ಸಂಬಂಧ ನಾನು ಕೆಲವು ಹೆಸರುಗಳನ್ನು ದೂರವಾಣಿ ನಂಬರ್‌ ಸಹಿತ ನೀಡಿದ್ದೆ. ಆದರೆ ಅವರ ಬಗ್ಗೆ ತನಿಖೆಯೇ ಆಗಿಲ್ಲ. ಅವರೆಲ್ಲ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ, ಇದು ತನಿಖೆ ದಾರಿ ತಪ್ಪಿರುವುದನ್ನು ಸಾಬೀತು ಪಡಿಸುತ್ತದೆ. ಹಾಗೆಯೇ ಕಾರ್ತಿಕ್‌ ಎಲ್ಲಿದ್ದಾನೆ ಎಂಬ ಮಾಹಿತಿ ತಮಗಿರುವುದಾಗಿ ಶಿವರಾಮೇ ಗೌಡರು ನನಗೆ ತಿಳಿಸಿದ್ದಾರೆ ಎಂದರು.

ಶಿವರಾಮೇಗೌಡ ಮಧ್ಯವರ್ತಿ
ಶಿವರಾಮೇಗೌಡ ಕರೆ ಮಾಡಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರ ಹೆಸರನ್ನು ಹೇಳಬೇಡಿ ಎಂದು ಸೂಚನೆ ನೀಡಿದ್ದಾರೆ ಎಂದು ಆರೋಪ ಮಾಡಿದ ದೇವರಾಜೇಗೌಡ, ಅದಕ್ಕೆ ಸಂಬಂಧಪಟ್ಟ ಆಡಿಯೋವನ್ನು ಬಿಡುಗಡೆ ಮಾಡಿದರು. ಈ ಪ್ರಕರಣದಲ್ಲಿ ಶಿವರಾಮೇಗೌಡ ಮಧ್ಯವರ್ತಿ. ಡಿ.ಕೆ. ಶಿವಕುಮಾರ್‌ ಪರವಾಗಿ ಕೆಲಸ ಮಾಡಿದ್ದಾರೆ. ನನ್ನನ್ನು ಹತ್ತಕ್ಕೂ ಹೆಚ್ಚು ಸಲ ಸ್ಟಾರ್‌ ಹೋಟೆಲ್‌ಗ‌ಳಲ್ಲಿ ಭೇಟಿಯಾಗಿದ್ದಾರೆ ಎಂದು ದೇವರಾಜೇಗೌಡ ಆರೋಪಿಸಿದರು. ಪ್ರಕರಣದಲ್ಲಿನ ನೈಜ ಸಂತ್ರಸ್ತರು ಬೇರೆಯೇ ಇದ್ದಾರೆ. ಸಂತ್ರಸ್ತರ ಸಂಖ್ಯೆಗೆ ಸಂಬಂಧಿಸಿ ತಪ್ಪು ಮಾಹಿತಿ ನೀಡಲಾಗಿದೆ ಎಂದರು.

ಅಧಿಕಾರಿ ಹೆಸರು ಹೇಳಲು ಹಿಂಜರಿಕೆ
ಡಿ.ಕೆ. ಶಿವಕುಮಾರ್‌ ಅವರ ಹೆಸರನ್ನು ಹೇಳಿಕೆಯಿಂದ ಕೈಬಿಡುವಂತೆ ಸೂಚಿಸಿದ ಐಪಿಎಸ್‌ ಅಧಿಕಾರಿ ಯಾರು ಎಂದು ಹೇಳಲು ದೇವರಾಜೇಗೌಡ ಆರಂಭದಲ್ಲಿ ಹಿಂಜರಿದರು. ಆದರೆ ಸುದ್ದಿಗಾರರು ಪಟ್ಟು ಹಿಡಿದಾಗ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳಲ್ಲಿ ಸಣ್ಣಕ್ಕೆ ಇರುವ ಅಧಿಕಾರಿ. ಅವರು ಸಿವಿಲ್‌ ಡ್ರೆಸ್‌ನಲ್ಲಿ ಇದ್ದುದರಿಂದ ಅವರ ಹೆಸರು ಗೊತ್ತಾಗಿಲ್ಲ ಎಂದರು. ಆದರೆ ಆ ಬಳಿಕ ಮತ್ತೆ ಪತ್ರಕರ್ತರು ಪ್ರಶ್ನಿಸಿದಾಗ ಅವರು ಚಿತ್ರ ಇದ್ದರೆ ಹೇಳಬಹುದು ಎಂದರು. ಆಗ ಪತ್ರಕರ್ತರೊಬ್ಬರು ಅಧಿಕಾರಿಗಳ ಭಾವಚಿತ್ರ ತೋರಿಸಿದಾಗ ಸುಮನ್‌
ಡಿ. ಪನ್ನೇಕರ್‌ ಅವರ ಚಿತ್ರವನ್ನು ಕಂಡು ಇವರೇ ಎಂದರು. ಪತ್ರಕರ್ತರು ಇವರು ಸುಮನ್‌ ಡಿ. ಪನ್ನೇಕರ್‌ ಎಂದಾಗ ನನಗೆ ಅವರ ಹೆಸರು ಗೊತ್ತಿಲ್ಲ ಎಂದರು.

ಬಿಜೆಪಿ ಜೆಡಿಎಸ್‌ ಮೈತ್ರಿಗೆ ಮಸಿ ಬಳಿಯುವ ಉದ್ದೇಶದಿಂದ ಪೆನ್‌ ಡ್ರೈವ್‌ ಹಂಚಿಕೆ ಮಾಡಲಾಗಿದೆ. ಇವರ ಮುಖ್ಯ ಗುರಿ ನರೇಂದ್ರ ಮೋದಿ. ಅವರ ಹೆಸರಿಗೆ ಮಸಿ ಬಳಿಯಲು ಈ ಪ್ರಕರಣ ಸೃಷ್ಟಿಸಲಾಗಿದೆ.
-ದೇವರಾಜೇ ಗೌಡ, ಬಿಜೆಪಿ ಮುಖಂಡ

ಟಾಪ್ ನ್ಯೂಸ್

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.