ಪೇಜಾವರ ಮಠದ ವಿಶ್ವೇಶತೀರ್ಥರ ವೃಂದಾವನಕ್ಕೆ ಭೇಟಿ
Team Udayavani, Jan 19, 2020, 3:04 AM IST
ಬೆಂಗಳೂರು: ರಾಜ್ಯ ಪ್ರವಾಸದಲ್ಲಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮಧ್ಯಾಹ್ನ ಕತ್ರಿಗುಪ್ಪೆಯ ಪೂರ್ಣಪ್ರಜ್ಞಾ ವಿದ್ಯಾಪೀಠದಲ್ಲಿರುವ ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರ ವೃಂದಾ ವನಕ್ಕೆ ಭೇಟಿ ನೀಡಿ ಭಕ್ತಿ ನಮನ ಸಲ್ಲಿಸಿದರು.
ಅರಮನೆ ಮೈದಾನದ ಕಾರ್ಯಕ್ರಮ ಬಳಿಕ ವಿದ್ಯಾಪೀಠಕ್ಕೆ ಆಗಮಿಸಿದ ಅಮಿತ್ ಶಾ, ಮೊದಲು ಬೃಂದಾವನ ಪಕ್ಕದ ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದರು. ಬಳಿಕ ಶ್ರೀಗಳ ವೃಂದಾವನಕ್ಕೆ ಮತ್ತು ವೃಂದಾವನದ ಮುಂಭಾಗ ಇರಿಸಿದ್ದ ಶ್ರೀಗಳ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕೆಲ ನಿಮಿಷಗಳವರೆಗೆ ಧ್ಯಾನ ಮಾಡಿದರು. ಇದೇ ವೇಳೆ ಮಠದ ವಿದ್ವಾಂಸ ಹರಿದಾಸ ಭಟ್ಟ ಅವರು ಗೃಹ ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು.
ವೃಂದಾವನಕ್ಕೆ ನಮನ ಸಲ್ಲಿಸಿದ ನಂತರ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿ, ವಿದ್ಯಾಪೀಠಕ್ಕೆ ಬಂದಿರುವುದಾಗಿ ತಿಳಿಸಿದರು. ಉಡುಪಿಯ ಮಠಕ್ಕೂ ಬರುವಂತೆ ಶ್ರೀಗಳು ಆಹ್ವಾನ ನೀಡಿದರು ಎಂದು ಮಠದ ಮೂಲಗಳು ತಿಳಿಸಿವೆ. ಸಿಎಂ ಯಡಿಯೂರಪ್ಪ, ಡಿಸಿಎಂ ಅಶ್ವತ್ಥನಾರಾಯಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ