ಶಿವಮೊಗ್ಗ: ಸ್ಥಳ ಮಹಜರು ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು
Team Udayavani, Oct 26, 2022, 12:12 PM IST
ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿಯೊಬ್ಬ ಸ್ಥಳ ಮಹಜರಿಗೆ ಕೆರೆದುಕೊಂಡು ಹೋಗುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಶಿವಮೊಗ್ಗದ ವೆಂಕಟೇಶನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಯೋಗಿಯಾಗಿದ್ದ ವಿಜಯ್ ಕೊಲೆ ಪ್ರಕರಣದಲ್ಲಿ ಪೊಲೀಸರು ಜಬೀ, ದರ್ಶನ್, ಕಾರ್ತಿಕ್ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಎ1 ಆರೋಪಿ ಆಗಿರುವ ಜಬೀಯನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗುವ ವೇಳೆ ಆರೋಪಿ ಜಬೀ ಪೊಲೀಸ್ ಸಿಬ್ಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ
ಈ ವೇಳೆ ಕುಂಸಿ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹರೀಶ್ ಪಟೇಲ್ ಆತ್ಮ ರಕ್ಷಣೆಗೆ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಘಟನೆಯಲ್ಲಿ ಪೊಲೀಸ್ ಪೇದೆ ರೋಷನ್ ಅವರಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೆಗ್ಗಾನ್ ಆಸ್ಪತ್ರೆಗೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ
ವಿದ್ಯಾವಂತರಿಗೆ ಸರಕಾರ ಉದ್ಯೋಗ ನೀಡದೆ ನರೇಗಾ ಕೆಲಸಕ್ಕೆ ತಳ್ಳಿದೆ : ಶಾಸಕ ಗಣೇಶ್
ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್
ಸಂಪೂರ್ಣ ಕೇಸರಿಮಯವಾದ ಮಹಾಲಿಂಗಪುರ… ಯುವಶಕ್ತಿ ಸಮಾಗಮ
7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ
MUST WATCH
ಹೊಸ ಸೇರ್ಪಡೆ
ವಿಮಾನದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ:ಬ್ಯಾಂಕಾಕ್‌ಗೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು
ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ
ವಿದ್ಯಾವಂತರಿಗೆ ಸರಕಾರ ಉದ್ಯೋಗ ನೀಡದೆ ನರೇಗಾ ಕೆಲಸಕ್ಕೆ ತಳ್ಳಿದೆ : ಶಾಸಕ ಗಣೇಶ್
ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ
ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್