ಜಿಎಸ್‌ಟಿ ಸೋರಿಕೆ ತಡೆಗೆ ಕ್ರಮ: ಸಿಎಂ

Team Udayavani, Dec 15, 2018, 7:14 AM IST

62.jpg

ವಿಧಾನಸಭೆ: “ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ಸೋರಿಕೆ ಯಾಗುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್‌ಟಿ ವಿಧೇಯಕವನ್ನು ರಾಜ್ಯ ಸರ್ಕಾರ ಅಂಗೀಕರಿಸಲು ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ)ವಿಧೇಯಕ 2018 ಮಂಡಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜಿಎಸ್‌ಟಿ ಕಾಯ್ದೆ ಜಾರಿಗೆ ಬಂದ ಮೇಲೆ ತೆರಿಗೆ ಸಂಗ್ರಹ ಹೆಚ್ಚಳವಾಗಿದೆ ಎಂದರು. ಜಿಎಸ್‌ಟಿ ಬಗ್ಗೆ ಜನರಿಗೆ ತಿಳಿವಳಿಕೆ ನೀಡಲು ಜಿಲ್ಲಾ ಕೇಂದ್ರಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ವ್ಯಾಪಾ ರಸ್ಥರಿಗೂ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2017- 18ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ 7500 ಕೋಟಿ ರೂ. ಜಿಎಸ್‌ಟಿ ಪರಿಹಾರ ಹಣ ಬಂದಿದೆ. ಈ ವರ್ಷ ಕೇಂದ್ರದಿಂದ ಬರುವ ಹಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದರು.

ರಾಜ್ಯ ಸರ್ಕಾರದ ಪರ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರೇ ಜಿಎಸ್‌ಟಿ ಕೌನ್ಸಿಲ್‌ ಸಭೆಗೆ ಹಾಜರಾಗುತ್ತಿದ್ದಾರೆ. ರಾಜ್ಯದಲ್ಲಿನ ಸಮಸ್ಯೆಗಳನ್ನು ಪ್ರತಿ ಬಾರಿ ಕೌನ್ಸಿಲ್‌ ಸಭೆಯಲ್ಲಿ ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ ಎಂದರು. ಎಪಿಎಂಸಿಗಳಲ್ಲಿ ಸುಳ್ಳು ದಾಖಲೆ ತೋರಿಸಿ ತೆರಿಗೆ ವಂಚನೆ ಮಾಡುವ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆದ ಬಿಜೆಪಿಯ ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಬಿ.ಸಿ. ನಾಗೇಶ್‌ ಅವರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ತೆರಿಗೆ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಲು ಸರ್ಕಾರ ತಕ್ಷಣ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು. ವಹಿವಾಟುಗಳಲ್ಲಿ ತಪ್ಪು ಮಾಹಿತಿ ನೀಡುತ್ತಿರುವವರ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದ್ದು, 8 ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಜಿಎಸ್‌ಟಿ ಕಾಯ್ದೆಯ ಬಗ್ಗೆ ರಾಜ್ಯದ ಅಧಿಕಾರಿಗಳು ಅಪ್‌ಡೇಟ್‌ ಆಗುತ್ತಿಲ್ಲ. ಕೇಂದ್ರದ
ಕಾಯ್ದೆ ಎಂದು ನಿರ್ಲಕ್ಷ್ಯ ತೋರುತ್ತಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಹೆಲ್ಪ್ಡೆಸ್ಕ್ ಗಳಲ್ಲಿ ಸಂಪೂರ್ಣ ಮಾಹಿತಿ ಹೊಂದಿರುವ ಅಧಿಕಾರಿಗಳನ್ನು ನಿಯೋಜಿಸಬೇಕೆಂದು ಸಲಹೆ ನೀಡಿದರು. ಪ್ರತಿಪಕ್ಷಗಳ ಸಲಹೆಯಂತೆ ತರಬೇತಿ ಹೊಂದಿದ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಜಿಎಸ್‌ಟಿ ಬಂದ ಮೇಲೆ ಚೆಕ್‌ಪೋಸ್ಟ್‌ ಗಳನ್ನು ರದ್ದು ಮಾಡಿರುವುದರಿಂದ ಆದಾಯ ಸೋರಿಕೆ ಮತ್ತು ಕಳ್ಳ ಸಾಗಾಣಿಕೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. 

ಕೇಂದ್ರ ಗೃಹ ಸಚಿವರ ಜತೆ ಚರ್ಚೆ: ಭರವಸೆ
ವಿಧಾನಸಭೆ: ವಿಧಾನಸಭೆ ಕ್ಷೇತ್ರಗಳಲ್ಲಿ ಶಾಸಕರಿಗೂ ರಾಷ್ಟ್ರಧ್ವಜಾರೋಹಣ ಮಾಡಲು ಅವಕಾಶ ಕಲ್ಪಿಸುವ ಕುರಿತು ಕೇಂದ್ರ ಗೃಹ ಸಚಿವರ ಜತೆ ಚರ್ಚಿಸಲಾಗುವುದು ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಶೂನ್ಯ ವೇಳೆಯಲ್ಲಿ ಜೆಡಿಎಸ್‌ನ ನಾಗನಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ರಾಷ್ಟ್ರ ಧ್ವಜಾರೋಹಣ ವಿಚಾರ ಕೇಂದ್ರದ ಕಾಯ್ದೆ ವ್ಯಾಪ್ತಿಯಲ್ಲಿ ಬರುತ್ತದೆ. ಹೀಗಾಗಿ, ರಾಜ್ಯಮಟ್ಟದಲ್ಲಿ ಏನೂ ಮಾಡಲಾಗುವುದಿಲ್ಲ. ದೆಹಲಿಗೆ ಹೋದಾಗ ಕೇಂದ್ರ ಗೃಹ ಸಚಿವರ ಬಳಿ ಮಾತನಾಡಿ
ನಿಯಮಾವಳಿ ಸರಳೀಕರಣ ಮಾಡಬಹುದಾ ಎಂದು ಚರ್ಚಿಸಲಿದ್ದೇನೆ ಎಂದು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ನಾಗನಗೌಡ, ಪ್ರಧಾನಿಗಳು ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸುತ್ತಾರೆ. ಮುಖ್ಯ ಮಂತ್ರಿಗಳು ಮಾಣಿಕ್‌ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಮಟ್ಟದಲ್ಲಿ ಧ್ವಜಾರೋಹಣ ಮಾಡುತ್ತಾರೆ. ಆದರೆ, ತಾಲೂಕು ಮಟ್ಟದಲ್ಲಿ ತಹಸೀಲ್ದಾರ್‌ ಧ್ವಜಾರೋಹಣ ಮಾಡಿದರೆ ನಮ್ಮ ಹಕ್ಕಿಗೆ ಚ್ಯುತಿಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ಕೇಂದ್ರದ ಜತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. 

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.