ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು
Team Udayavani, Jan 21, 2022, 6:50 AM IST
ಬೆಂಗಳೂರು: ಕೊರೊನಾ ಸಮಯದಲ್ಲಿ ಸಮ ರ್ಪಕ ಪಾಠ- ಪ್ರವಚನಗಳು ನಡೆಯದಿರುವ ಕಾರಣ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣದಿಂದ ಈ ಬಾರಿಯ ದ್ವಿತೀಯ ಪಿಯುಸಿ ಐಚ್ಛಿಕ ವಿಷಯಗಳ ಮುಖ್ಯ ಪರೀಕ್ಷೆಯಲ್ಲಿ ಹೆಚ್ಚುವರಿ ಪ್ರಶ್ನೆಗಳನ್ನು ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಸಾಮಾನ್ಯವಾಗಿ ಮುಖ್ಯ ಪರೀಕ್ಷೆಯಲ್ಲಿ ಒಂದು ಮತ್ತು ಎರಡು ಅಂಕದ ಪ್ರಶ್ನೆಗಳಿಗೆ ಯಾವುದೇ ಬಹುಆಯ್ಕೆ ಪ್ರಶ್ನೆ ಗಳನ್ನು ನೀಡುತ್ತಿರಲಿಲ್ಲ. ಕಡ್ಡಾಯವಾಗಿ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಬೇಕಿತ್ತು. 5 ಮತ್ತು 10 ಅಂಕದ ಪ್ರಶ್ನೆಗಳಿಗೆ ಮಾತ್ರ ಆಯ್ಕೆ ಪ್ರಶ್ನೆಗಳನ್ನು ನೀಡಲಾಗುತ್ತಿತ್ತು. ದ್ವಿತೀಯ ಪಿಯುಸಿ ಪರೀಕ್ಷೆಗೆ ಈ ಬಾರಿ 6,01,026 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಎಲ್ಲ ಮಾದರಿಗೂ ಹೆಚ್ಚುವರಿ ಪ್ರಶ್ನೆ:
ಈ ಬಾರಿ ಒಂದು, ಎರಡು, ಐದು ಮತ್ತು ಹತ್ತು ಅಂಕ ಸಹಿತ ಎಲ್ಲ ಮಾದರಿಗೂ ಹಿಂದಿನ ವರ್ಷಕ್ಕಿಂತ ಕನಿಷ್ಠ 2ರಿಂದ 3 ಪ್ರಶ್ನೆಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತದೆ. ಇದರಿಂದ ಉತ್ತರಿಸಲು ಸುಲಭವಾಗಲಿದೆ. ಹೆಚ್ಚುವರಿ ಪ್ರಶ್ನೆಗಳು ಹೊರತು
ಪಡಿಸಿ ಪ್ರಶ್ನೆಪತ್ರಿಕೆ ಮಾದರಿ ಹಿಂದಿನಂತೆಯೇ ಇರಲಿದೆ. ಈ ಮಾದರಿ ಪ್ರಸ್ತುತ ವರ್ಷಕ್ಕೆ ಮಾತ್ರ ಸೀಮಿತವಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾಷಾ ವಿಷಯದಲ್ಲಿ ಶೇ.30ರಷ್ಟು ಪಠ್ಯ ಕಡಿತ ಮಾಡ ಲಾಗಿದೆ.
ಕೊರೊನಾ ಕಾಲದಲ್ಲಿ ಸರಿಯಾದ ಬೋಧನೆ ನಡೆಯದಿದ್ದರೆ, ಬೇರೊಂದು ಪ್ರಶ್ನೆಗೆ ಉತ್ತರಿಸಿ ವಿದ್ಯಾರ್ಥಿ ಹೆಚ್ಚು ಅಂಕ ಪಡೆಯಲಿ ಎಂಬ ಉದ್ದೇಶದಿಂದ ಹೆಚ್ಚುವರಿ ಪ್ರಶ್ನೆಗಳನ್ನು ನೀಡಲಾಗುತ್ತಿದೆ. ಈ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಿಸಿಕೊಳ್ಳಬೇಕು.–ಆರ್. ಸ್ನೇಹಲ್, ಪಿಯು ಇಲಾಖೆ ನಿರ್ದೇಶಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ
ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ
ಮುಂಗಾರು ಪೂರ್ವ ಬಿತ್ತನೆ ಚಟುವಟಿಕೆ ಆರಂಭ : ರೋಹಿಣಿ ಮಳೆಯ ನಿರೀಕ್ಷೆಯಲ್ಲಿ ರೈತ
MUST WATCH
ಹೊಸ ಸೇರ್ಪಡೆ
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ