Session: ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
Team Udayavani, Feb 29, 2024, 9:58 PM IST
ಬೆಂಗಳೂರು: ಕಳೆದ 13 ದಿನಗಳಿಂದ ನಡೆಯುತ್ತಿದ್ದ ವಿಧಾನ ಮಂಡಲ ಕಲಾಪವು ವಿಪಕ್ಷಗಳ ಅನುಪಸ್ಥಿತಿಯಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಯಿತು.
ಫೆ.12ರಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭಾಷಣ ಮಾಡುವ ಮೂಲಕ ಕಲಾಪಕ್ಕೆ ಚಾಲನೆ ಸಿಕ್ಕಿತ್ತು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಬೆಂಬಲಿಸಿ 12 ಸದಸ್ಯರು 10 ಗಂಟೆಗಳ ಕಾಲ ಚರ್ಚಿಸಿದ್ದಾರೆ. ಫೆ.16ರಂದು ಸಿಎಂ ಸಿದ್ದರಾಮಯ್ಯ 3.71 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ 25 ಶಾಸಕರು 8 ಗಂಟೆಗಳ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
ಇದೆಲ್ಲದರ ಮಧ್ಯೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಮಸೂದೆಯನ್ನು ವಿಧಾನಸಭೆಯಲ್ಲಿ ಮರುಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಯಿತು. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಪ್ರದರ್ಶನ, ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಮೀಸಲಾತಿ ನೀಡುವ ಮಸೂದೆ ಸಹಿತ ಒಟ್ಟು 26 ಮಸೂದೆಗಳನ್ನು ಮಂಡಿಸಿ, ಅನುಮೋದನೆ ಪಡೆದುಕೊಳ್ಳಲಾಯಿತು. ಮೋಡ ಬಿತ್ತನೆ ಕುರಿತಂತೆ ಕಾಂಗ್ರೆಸ್ನ ಪ್ರಕಾಶ್ ಕೋಳಿವಾಡ ಮಂಡಿಸಿದ್ದ ಖಾಸಗಿ ಮಸೂದೆಯನ್ನು ರಾಜ್ಯಪಾಲರಿಗೆ ರವಾನಿಸಿದ್ದು, ಅನುಮತಿ ಸಿಕ್ಕಿದರಷ್ಟೇ ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ