Udayavni Special

ಸಂವಿಧಾನಬದ್ಧವಾಗಿ ಕ್ರಮ ಕೈಗೊಳ್ಳಲು ಸ್ಪೀಕರ್‌ಗೆ ಸಲಹೆ ನೀಡಿ


Team Udayavani, Jul 11, 2019, 3:00 AM IST

Udayavani Kannada Newspaper

ಬೆಂಗಳೂರು: ಕಾಂಗ್ರೆಸ್‌, ಜೆಡಿಎಸ್‌ನ 14 ಶಾಸಕರು ರಾಜೀನಾಮೆ ನೀಡಿದ್ದು, ವಿಧಾನಸಭಾಧ್ಯಕ್ಷರು ಕೂಡಲೇ ಸಂವಿಧಾನಬದ್ಧವಾಗಿ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಬೇಕು ಎಂದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.

ಯಡಿಯೂರಪ್ಪ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಸೇರಿದಂತೆ ಬಿಜೆಪಿ ಶಾಸಕರ ನಿಯೋಗ ಬುಧವಾರ ರಾಜ್ಯಪಾಲ ವಿ.ಆರ್‌.ವಾಲಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ವಿಧಾನಸಭಾಧ್ಯಕ್ಷರು ಇದೇ 12ರಿಂದ 26ರವರೆಗೆ ವಿಧಾನಮಂಡಲ ಅಧಿವೇಶನ ಕರೆದಿದ್ದು, ಮಹತ್ವದ 2019-2020ನೇ ಸಾಲಿನ ಆಯವ್ಯಯಕ್ಕೆ ಅನುಮೋದನೆ ನೀಡಬೇಕಿದೆ. ಜುಲೈ ಅಂತ್ಯಕ್ಕೆ ಲೇಖಾನುದಾನ ಬಳಕೆ ಅವಧಿ ಮುಕ್ತಾಯವಾಗಲಿದೆ. ಈ ನಡುವೆ ಕಾಂಗ್ರೆಸ್‌, ಜೆಡಿಎಸ್‌ನ 14 ಶಾಸಕರು ರಾಜೀನಾಮೆ ನೀಡಿದ್ದು, ಇಬ್ಬರು ಪಕ್ಷೇತರರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸುವುದಾಗಿ ಪ್ರಕಟಿಸಿದ್ದಾರೆ ಎಂದು ನಿಯೋಗ ಮನವಿ ಪತ್ರದಲ್ಲಿ ತಿಳಿಸಿದೆ.

ಸಂವಿಧಾನದ ವಿಧಿ 190(3)(ಬಿ) ಹಾಗೂ ಕರ್ನಾಟಕ ವಿಧಾನಮಂಡಲ ಸದನ ಕಲಾಪ ನಡಾವಳಿ ನಿಯಮ-202ರ ಪ್ರಕಾರ ಯಾವುದೇ ಶಾಸಕ ಖುದ್ದಾಗಿ ರಾಜೀನಾಮೆ ನೀಡಿದರೆ ಸ್ಪೀಕರ್‌ ಅಂಗೀಕರಿಸಬೇಕು. ರಾಜೀನಾಮೆ ಪತ್ರವನ್ನು ಅಂಚೆ ಇಲ್ಲವೇ ಮತ್ತೂಬ್ಬರ ಮೂಲಕ ಸಲ್ಲಿಸಿದಾಗ ಅದರ ನೈಜತೆಯನ್ನು ಪರಿಶೀಲಿಸಬೇಕು.

ಹಾಗಾಗಿ, ರಾಜೀನಾಮೆ ಅಂಗೀಕರಿಸುವುದೊಂದೇ ಸ್ಪೀಕರ್‌ ಮುಂದಿರುವ ಆಯ್ಕೆ. ಇಷ್ಟಾದರೂ ಸ್ಪೀಕರ್‌ ನಾನಾ ದಿನಾಂಕಗಳನ್ನು ನಿಗದಿಪಡಿಸಿ ಕಚೇರಿಯಲ್ಲಿ ಭೇಟಿಯಾಗುವಂತೆ ಶಾಸಕರಿಗೆ ಸೂಚಿಸಿರುವ ಬಗ್ಗೆ ಮಾಧ್ಯಮಗಳಿಂದ ಗೊತ್ತಾಗಿದೆ. ಆ ಮೂಲಕ ಅಂಗೀಕಾರ ಪ್ರಕ್ರಿಯೆ ವಿಳಂಬ ಮಾಡಿದಂತೆ ಕಾಣುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖೀಸಿದ್ದಾರೆ.

ರಾಜೀನಾಮೆ ಸಲ್ಲಿಸಿರುವ ಶಾಸಕರು, ಅದರ ಒಂದು ಪ್ರತಿಯನ್ನು ತಮಗೂ ಸಲ್ಲಿಸಿದ್ದಾರೆ. ಅಲ್ಲದೇ ತಾವು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಮಾಧ್ಯಮಗಳಲ್ಲಿ ಹಲವು ಬಾರಿ ಹೇಳಿದ್ದಾರೆ. ತಾವೂ ಸಹ ತ್ವರಿತವಾಗಿ ರಾಜೀನಾಮೆಗಳನ್ನು ಪರಿಶೀಲಿಸಿ ಇತ್ಯರ್ಥಪಡಿಸುವಂತೆ ಸೂಚಿಸಿದ್ದೀರಿ ಎಂಬ ಮಾಹಿತಿ ಇದೆ.

ಶಾಸಕರು ಜು.6ರಂದು ರಾಜೀನಾಮೆ ನೀಡಿದರೂ ಸ್ಪೀಕರ್‌, ಆಡಳಿತ ಪಕ್ಷಕ್ಕೆ ಸರ್ಕಾರ ನಡೆಸಲು ಅವಕಾಶ ನೀಡಿದ್ದಾರೆ. ಅವರು ಶಾಸಕರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಜತೆಗೆ, ಕೆಲ ಸಚಿವರು ಶಾಸಕರಿರುವ ಸ್ಥಳಗಳಿಗೆ ತೆರಳಿ ಬೆದರಿಕೆ ಒಡ್ಡುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಅಣಕದಂತಿದೆ. ಯಾವುದೇ ಶಾಸಕರು ರಾಜೀನಾಮೆ ನೀಡಿದರೆ ಅದನ್ನು ಪ್ರಶ್ನಿಸುವುದು ಎಷ್ಟು ಸರಿ ಎಂದು ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಹಾಗಾಗಿ, ಸಂವಿಧಾನಾತ್ಮಕವಾಗಿ ಸ್ಪೀಕರ್‌ ಅವರು ತಕ್ಷಣವೇ ರಾಜೀನಾಮೆಗಳನ್ನು ಇತ್ಯರ್ಥಪಡಿಸುವಂತೆ ತಾವು ಸಲಹೆ ನೀಡಬೇಕು. ಜತೆಗೆ, ಅಲ್ಪಮತಕ್ಕೆ ಕುಸಿದಿರುವ ಸರ್ಕಾರ ಯಾವುದೇ ಆದೇಶ, ನಿರ್ಧಾರ ಕೈಗೊಳ್ಳದಂತೆ ತಡೆಯಲು ಕ್ರಮ ವಹಿಸುವಂತೆಯೂ ಸಲಹೆ ನೀಡಬೇಕು.

ಇಂತಹ ಸಂದರ್ಭದಲ್ಲಿ ಪ್ರತಿಪಕ್ಷವಾಗಿ ರಾಜ್ಯದ ಹಿತ ಕಾಪಾಡುವುದು ನಮ್ಮ ಕರ್ತವ್ಯ. ನಮ್ಮ ಭಾವನೆಯನ್ನು ಅರ್ಥ ಮಾಡಿಕೊಂಡು ತಾವು ಸಂವಿಧಾನಾತ್ಮಕವಾಗಿ ಸೂಕ್ತ ಕ್ರಮವನ್ನು ತ್ವರಿತವಾಗಿ ಕೈಗೊಳ್ಳುವ ನಿರೀಕ್ಷೆ ಇದೆ. ಹಾಗೆಯೇ ಆಡಳಿತ ಪಕ್ಷ ಹಾಗೂ ಸ್ಪೀಕರ್‌ಗೆ ಮಾರ್ಗದರ್ಶನ ಮಾಡುವ ವಿಶ್ವಾಸವಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಸ್ಪೀಕರ್‌ಗೆ ನಿರ್ದೇಶನ ನೀಡಲು ಮನವಿ: ರಾಜ್ಯಪಾಲರ ಭೇಟಿ ಬಳಿಕ ಪ್ರತಿಕ್ರಿಯಿಸಿದ ಬಿ.ಎಸ್‌.ಯಡಿಯೂರಪ್ಪ, ರಾಜ್ಯಪಾಲರಿಗೆ ಎರಡು ವಿಚಾರಗಳ ಬಗ್ಗೆ ಮನವಿ ಮಾಡಲಾಗಿದೆ. ಕಾಂಗ್ರೆಸ್‌, ಜೆಡಿಎಸ್‌ನ 14 ಮಂದಿ ರಾಜೀನಾಮೆಯಿಂದ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಕೂಡಲೇ ತಾವು ಮಧ್ಯಪ್ರವೇಶಿಸಿಬೇಕು.

ರಾಜೀನಾಮೆ ಇತ್ಯರ್ಥಪಡಿಸಲು ಸ್ಪೀಕರ್‌ ವಿಳಂಬ ಮಾಡುತ್ತಿದ್ದಾರೆ ಎಂಬ ಭಾವನೆ ಬರುತ್ತಿದ್ದು, ತ್ವರಿತವಾಗಿ ಇತ್ಯರ್ಥಪಡಿಸುವಂತೆ ಸ್ಪೀಕರ್‌ಗೆ ಸೂಚನೆ ನೀಡಬೇಕು. ಹಾಗೆಯೇ, ಯಾವುದೇ ಶಾಸಕರು ರಾಜೀನಾಮೆ ಸಲ್ಲಿಸಲು ಹೋದರೆ ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡುವಂತೆ ಕೋರಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

fgrte

ಗಡಿ ನುಸುಳಲು ಉಗ್ರರ ಯತ್ನ : ‘ಉರಿ’ಯಲ್ಲಿ ಮೊಬೈಲ್-ಇಂಟರ್ನೆಟ್ ಸೇವೆ ಸ್ಥಗಿತ

ಬಂಗಾರ ಲೇಪಿತ ಮೋದಕಕ್ಕೆ ಭಾರೀ ಬೇಡಿಕೆ ! ಒಂದು ಕೆಜಿಗೆ 12,000 ರೂ.

ಬಂಗಾರ ಲೇಪಿತ ಮೋದಕಕ್ಕೆ ಭಾರೀ ಬೇಡಿಕೆ ! ಒಂದು ಕೆಜಿಗೆ 12,000 ರೂ.

cfhdrtr

133 ವಿದ್ಯಾರ್ಥಿಗಳಿಗೆ ಒಬ್ಬರೇ ಶಿಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

fbdfgtre

ಕೋವಿಡ್ : 8 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ | ರಾಜ್ಯದಲ್ಲಿಂದು 677 ಹೊಸ ಕೇಸ್ ಪತ್ತೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಆಸೆ

ಸಿಎಂ ಬೊಮ್ಮಾಯಿಯವರು ರೈತರ ಕ್ಷಮೆ ಕೋರಬೇಕು: ಡಿ.ಕೆ. ಶಿವಕುಮಾರ್ ಆಗ್ರಹ

ಸಿಎಂ ಬೊಮ್ಮಾಯಿಯವರು ರೈತರ ಕ್ಷಮೆ ಕೋರಬೇಕು: ಡಿ.ಕೆ. ಶಿವಕುಮಾರ್ ಆಗ್ರಹ

ಸಿಇಟಿ ಫಲಿತಾಂಶ ಪ್ರಕಟ: ಎಲ್ಲಾ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮೇಘನ್ ಎಚ್.ಕೆ

ಸಿಇಟಿ ಫಲಿತಾಂಶ ಪ್ರಕಟ: ಎಲ್ಲಾ ವಿಭಾಗದಲ್ಲೂ ಪ್ರಥಮ ಸ್ಥಾನ ಪಡೆದ ಮೈಸೂರಿನ ಮೇಘನ್ ಎಚ್.ಕೆ

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

fgrte

ಗಡಿ ನುಸುಳಲು ಉಗ್ರರ ಯತ್ನ : ‘ಉರಿ’ಯಲ್ಲಿ ಮೊಬೈಲ್-ಇಂಟರ್ನೆಟ್ ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.