ರಾಜೀನಾಮೆ ಬಳಿಕ ಮುಂದಿನ ಕ್ರಮ: ಪರಂ
Team Udayavani, Apr 27, 2019, 5:00 AM IST
ಬೆಳಗಾವಿ: ರಮೇಶ ಜಾರಕಿಹೊಳಿ ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ಬಳಿಕ ಮುಂದೆ ಏನು ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿದ್ದು, ಸದ್ಯ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದು ಉಪಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ರಮೇಶ ಜಾರಕಿಹೊಳಿ ಇನ್ನೂ ಕಾಂಗ್ರೆಸ್‌ನಲ್ಲಿಯೇ ಇದ್ದಾರೆ. ಪಕ್ಷ ಬಿಟ್ಟು ಹೋದ ಬಳಿಕ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದರು. “ರಮೇಶ ರಾಜೀನಾಮೆ ನೀಡುತ್ತೇನೆಂದು ಅನೇಕ ಸಲ ಹೇಳುತ್ತಾ ಬಂದಿದ್ದಾರೆ.
ವರಿಷ್ಠರು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾನೂ ಬೆಂಗಳೂರಿನಲ್ಲಿ ಭೇಟಿಯಾಗಲು ಪ್ರಯತ್ನಿಸಿದೆ. ಆದರೆ, ಅವರು ಸಿಗಲಿಲ್ಲ. ರಾಜೀನಾಮೆ ನೀಡದಿದ್ದರೆ ಮುಂದೆ ಪಕ್ಷದಲ್ಲಿ ಅವರಿಗೆ ಯಾವ ಕೆಲಸ ಕೊಡಬೇಕು ಎಂಬುದರ ಬಗ್ಗೆ ನಿರ್ಧರಿಸುತ್ತೇವೆ. ಐದು ಬಾರಿ ಕಾಂಗ್ರೆಸ್‌ನಿಂದ ಗೆದ್ದಿರುವ ಸ್ನೇಹಿತ ರಮೇಶನನ್ನು ಕಳೆದುಕೊಳ್ಳಲು ನಮಗೆ ಇಷ್ಟವಿಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!