ಅಗ್ರಹಾರ ಕೃಷ್ಣಮೂರ್ತಿಗೆ ದಂಡ: ಆದೇಶ ರದ್ದುಗೊಳಿಸಿದ ಹೈಕೋರ್ಟ್
Team Udayavani, Aug 3, 2019, 3:04 AM IST
ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿದ್ದ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅವರಿಗೆ 30 ಲಕ್ಷ ರೂ. ದಂಡ ವಿಧಿಸಿ ಅಕಾಡೆಮಿಯ ಶಿಸ್ತು ಸಮಿತಿ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಶಿಸ್ತು ಸಮಿತಿ ದಂಡ ವಿಧಿಸಿ 2014ರ ಜೂ.3ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅಗ್ರಹಾರ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾ.ಪಿ.ಬಿ. ಭಜಂತ್ರಿ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಹಣ ದುರುಪಯೋಗ ಹಾಗೂ ಪಕ್ಷ ಪಾತದ ನಿರ್ಧಾರಗಳ ಆರೋಪ ಹಿನ್ನೆಲೆ ಯಲ್ಲಿ ತನಿಖೆ ನಡೆಸಿದ್ದ ಅಕಾಡೆಮಿಯ ಶಿಸ್ತು ಸಮಿತಿ 30 ಲಕ್ಷ ರೂ. ದಂಡ ವಿಧಿಸಿ ಆದೇಶಿ ಸಿತ್ತು. ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ನಿವೃತ್ತ ಅಧಿಕಾರಿಯ ವಿರುದ್ಧ ಅಕಾಡೆಮಿ ಆ ರೀತಿ ದಂಡ ವಿಧಿಸಿರುವುದು ಸರಿಯಲ್ಲ ಎಂದು ಹೇಳಿರುವ ನ್ಯಾಯಪೀಠ, ದಂಡ ವಿಧಿಸುವುದಾದರೆ ಹಾಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ ಅಥವಾ ಸಿಬ್ಬಂದಿಗೆ ವಿಧಿಸಬಹುದೇ ಹೊರತು ನಿವೃತ್ತರಾದವರಿಗಲ್ಲ.
ಏಕೆಂದರೆ ಅಕಾಡೆಮಿಯ ಬೈಲಾಗಳಲ್ಲಿ ಆ ರೀತಿ ನಿವೃತ್ತ ಸಿಬ್ಬಂದಿಗೆ ದಂಡ ವಿಧಿಸಲು ಅಧಿಕಾರವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಮೇ 2006ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಯಾಗಿ ನೇಮಕ ಗೊಂ ಡಿದ್ದ ಅಗ್ರಹಾರ ಕೃಷ್ಣಮೂರ್ತಿ, 2013ರ ಜ.30ರಂದು ನಿವೃತ್ತರಾಗಿದ್ದರು. ಆದರೆ, ಅದಕ್ಕೂ ಮೊದಲೇ 2012ರಲ್ಲಿ ತನಿಖೆ ಆರಂಭಿಸಿದ್ದ ಶಿಸ್ತು ಸಮಿತಿ 2014ರ ಜೂ.3ರಂದು 30 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ