ರೈತರ ಆದಾಯ ದ್ವಿಗುಣಗೊಳಿಸಲು ಒಡಂಬಡಿಕೆ: ಸಿಎಂ ಬೊಮ್ಮಾಯಿ
ಈಶಾ ಫೌಂಡೇಶನ್ ವತಿಯಿಂದ ನಾಗಮಂಟಪ ಉದ್ಘಾಟನೆ
Team Udayavani, Oct 8, 2022, 10:13 PM IST
ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯದಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಶಾ ಫೌಂಡೇಶನ್ ಜತೆ ಒಡಂಬಡಿಕೆ ಮಾಡಿಕೊಳ್ಳಲು ಸರಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಸಮೀಪ ಈಶಾ ಫೌಂಡೇಶನ್ ವತಿಯಿಂದ ನಾಗಮಂಟಪ ಉದ್ಘಾಟಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಕೊಂಡಿದೆ. ಅದೇ ಮಾದರಿಯಲ್ಲಿ ಈಶಾ ಫೌಂಡೇಶನ್ ಕೂಡ ರೈತರ ಆದಾಯವನ್ನು ದ್ವಿಗುಣಗೊಳಿಸಲು ಆಸಕ್ತಿ ಹೊಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದಲೇ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಸರಕಾರ ಸನ್ನದ್ಧವಾಗಿದೆ ಎಂದರು.
ಸದ್ಗುರುಗಳು ಕಾರ್ಮಿಕರ ಶ್ರಮ ಹಾಗೂ ರೈತರಿಗೆ ಬೆಲೆ ಕೊಡುವ ಮಾತಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತರ ಆದಾಯವನ್ನು ಹೆಚ್ಚಳಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದರು. ಸದ್ಗುರು ಜಗ್ಗಿ ವಾಸುದೇವ್, ಸಚಿವ ಡಾ| ಕೆ. ಸುಧಾಕರ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ