ಡಿಕೆ ಶಿವಕುಮಾರ್ ಭೇಟಿಯಾದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
Team Udayavani, Nov 21, 2020, 11:42 AM IST
ಬೆಂಗಳೂರು: ಪುಲಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಮನೆ ಮೇಲೆ ದಾಳಿ, ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮಾಜಿ ಮೇಯರ್ ಸಂಪತ್ ರಾಜ್ ರನ್ನು ಬಂಧಿಸಿದ್ದಾರೆ. ಡಿಕೆ ಶಿವಕುಮಾರ್ ಅವರೇ, ಇನ್ನಾದರೂ ನನಗೆ ನ್ಯಾಯ ದೊರಕಿಸಿ ಕೊಡಿ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಬಹಿರಂಗ ಹೇಳಿಕೆ ನೀಡಿದ್ದರು.
ಇಂದು ಶಾಸಕ ಅಖಂಡ ಅವರು ಡಿ.ಕೆ. ಶಿವಕುಮಾರ್ ರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಡಿಕೆಶಿ, ಶಾಸಕ ಅಖಂಡ ಶ್ರೀನಿವಾಸ್ ತಮಗಾದ ಅನ್ಯಾಯವನ್ನು ನೋವನ್ನು ಹಂಚಿಕೊಂಡಿದ್ದಾರೆ. ಅವರ ಸಂಕಷ್ಟ ನನಗೆ ಅರ್ಥವಾಗುತ್ತದೆ. ಅವರಿಗೆ ಖಂಡಿತವಾಗಿ ನ್ಯಾಯ ಒದಗಿಸಿಕೊಡುತ್ತೇನೆ ಎಂದು ತಿಳಿಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444