ಪರ್ಯಾಯ ಪುರಪ್ರವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ
Team Udayavani, Dec 14, 2019, 3:03 AM IST
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪೂಜೆ ಕೈಗೊಳ್ಳಲಿರುವ ಅದಮಾರು ಮಠಾಧೀಶರು ಪರ್ಯಾಯ ಪೂರ್ವಭಾವಿ ಸಂಚಾರವನ್ನು ಮುಗಿಸಿ, ಪುರಪ್ರವೇಶ ಮಾಡುವ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಶುಕ್ರವಾರ ಬೆಂಗಳೂರಿನ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಶ್ರೀಕೃಷ್ಣ ಸೇವಾ ಬಳಗದ ಗೌರವಾಧ್ಯಕ್ಷರಾದ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಸಂದರ್ಭ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಗೃಹ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಜಿ.ಪಂ.ಅಧ್ಯಕ್ಷ ದಿನಕರ ಬಾಬು, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ಶ್ರೀಕೃಷ್ಣ ಸೇವಾ ಬಳಗದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ವೇಳೆ, ಪರ್ಯಾಯೋತ್ಸವಕ್ಕೆ ಮುಖ್ಯಮಂತ್ರಿಯವರನ್ನು ಆಮಂತ್ರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…