ಜನಸಾಗರದ ವಿದಾಯ…ರೆಬೆಲ್ ಸ್ಟಾರ್ ಅಂಬಿ ಪಂಚಭೂತಗಳಲ್ಲಿ ಲೀನ
Team Udayavani, Nov 26, 2018, 5:28 PM IST
ಬೆಂಗಳೂರು: ಶನಿವಾರ ರಾತ್ರಿ ನಿಧನ ಹೊಂದಿದ್ದ ಮಾಜಿ ಸಚಿವ, ರೆಬೆಲ್ ಸ್ಟಾರ್ ಅಂಬರೀಷ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಪುತ್ರ ಅಭಿಷೇಕ್ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಸೋಮವಾರ ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು.
ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಲಾಯಿತು. ಜೊತೆಗೆ ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪುತ್ರ ಅಭಿಷೇಕ್ ಪುರೋಹಿತರ ಮಾರ್ಗದರ್ಶನದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಿದರು.
ಸರ್ಕಾರಿ ಗೌರವ ಸಲ್ಲಿಕೆ ಬಳಿಕ ತ್ರಿವರ್ಣ ಧ್ವಜವನ್ನು ಸಿಎಂ ಕುಮಾರಸ್ವಾಮಿ ಅವರು ಸುಮಲತಾ ಅವರಿಗೆ ಹಸ್ತಾಂತರಿಸಿದ್ದರು. ಇದಕ್ಕೂ ಮುನ್ನ ಸುಮಲತಾ ಅವರು ಚಿತೆ ಮೇಲೆ ಮಲಗಿರುವ ಪತಿ ಅಂಬರೀಶ್ ಪಾರ್ಥಿವ ಶರೀರವನ್ನು ಕಂಡು ಕಣ್ಣೀರು ಹಾಕುತ್ತಲೇ ಇದ್ದರು.
ಕಂಠೀರವ ಕ್ರೀಡಾಂಗಣದಿಂದ 13 ಕಿಲೋ ಮೀಟರ್ ವರೆಗೆ ಪುಷ್ಪಾಲಂಕೃತ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗಿ ಕಂಠೀರವ ಸ್ಟುಡಿಯೋಕ್ಕೆ ತರಲಾಗಿತ್ತು. ಅಂಬಿ ಅಂತಿಮಯಾತ್ರೆಯಲ್ಲಿ ಜನಸಾಗರವೇ ಹರಿದು ಬಂದಿತ್ತು. ಮುಂಜಾಗ್ರತಾ ಕ್ರಮವಾಗಿ 11 ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು.
ಕಂಠೀರವ ಸ್ಟುಡಿಯೋದ ಆವರಣದಲ್ಲಿ ಗಾಜಿನ ಪೆಟ್ಟಿಗೆಯಲ್ಲಿಟ್ಟಿದ್ದ ಅಂಬಿ ಪಾರ್ಥಿವ ಶರೀರಕ್ಕೆ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ, ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ, ಡಿಸಿಎಂ ಪರಮೇಶ್ವರ್, ಸಚಿವರಾದ ಎಚ್.ಡಿ.ರೇವಣ್ಣ, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಅರ್ಜುನ್ ಸರ್ಜಾ, ದೊಡ್ಡಣ್ಣ, ನಿಖಿಲ್ ಕುಮಾರಸ್ವಾಮಿ, ರಾಕ್ ಲೈನ್ ವೆಂಕಟೇಶ್, ಯಶ್, ದರ್ಶನ್, ಜಗ್ಗೇಶ್, ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ನೂರಾರು ಗಣ್ಯರು ಗೂಗುಚ್ಛ ಅರ್ಪಿಸಿ ಅಂತಿಮ ಗೌರವ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ
ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ
ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು
ನಿರಂತರ ಮಳೆಗೆ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ; ಶೀಘ್ರ ಭರ್ತಿಯಾಗಲಿದೆ ಯಗಚಿ ಜಲಾಶಯ
ಜೂ. 21: ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ